LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಪರಿಶಿಷ್ಟ ಜಾತಿ-ಪಂಗಡಗಳ ಕಲ್ಯಾಣಕ್ಕೆ ಆದ್ಯತೆ ನೀಡಿ

ಬಳ್ಳಾರಿ :  ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಕಲ್ಯಾಣಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸನ್ಮಾನ್ಯ ಅಧ್ಯಕ್ಷರಾದ ಡಾ. ಮೂರ್ತಿ ಎಲ್. ಅವರು ಹೇಳಿದರು.

 

ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ನಗರದ ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಜಿಲ್ಲೆಯಲ್ಲಿ ಎಸ್ಸಿಪಿ/ಟಿಎಸ್ಪಿ ಯೋಜನೆಗಳಿಗೆ, ವಿಶೇಷವಾಗಿ ಟಿಎಸ್ಪಿ ಅಡಿಯಲ್ಲಿ ಹೆಚ್ಚಿನ ಅನುದಾನ, ಸೌಲಭ್ಯಗಳು ಮತ್ತು ಕಾರ್ಯಕ್ರಮಗಳ ಅವಶ್ಯಕತೆಯಿದೆ. ಯೋಜನೆಗಳ ಅನುಷ್ಠಾನಕ್ಕೆ ಸರಿಯಾದ ಕ್ರಿಯಾ ಯೋಜನೆ ಹಾಗೂ ಹೆಚ್ಚುವರಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕು. ಸರ್ಕಾರ ಹಣ ಕೊಟ್ಟಿಲ್ಲ ಎಂದು ಸುಮ್ಮನೆ ಕೂರಬಾರದು, ಜನಸಂಖ್ಯೆಗೆ ಅನುಗುಣವಾಗಿ ಬೇಡಿಕೆ ಪಟ್ಟಿ ಸಲ್ಲಿಸುವುದು ನಿಮ್ಮ ಕರ್ತವ್ಯ ಎಂದು ತಿಳಿಸಿದರು.

 

ಯೋಜನೆಗಳ ಪ್ರಗತಿ ವರದಿಯನ್ನು ಕೇವಲ ಕಾಗದದ ಮೇಲೆ ಸೀಮಿತಗೊಳಿಸದೆ, ಕ್ಷೇತ್ರ ಮಟ್ಟದಲ್ಲಿ ಪರಿಶೀಲನೆ ನಡೆಸಬೇಕು. ಎಸ್ಸಿ/ಎಸ್ಟಿ ಸಮುದಾಯದ ಕಲ್ಯಾಣಕ್ಕಾಗಿ ಎಷ್ಟು ಸಭೆಗಳನ್ನು ನಡೆಸಲಾಗಿದೆ ಮತ್ತು ಕೈಗೊಂಡಿರುವ ಯೋಜನೆಗಳ ಫಲಿತಾಂಶವೇನು ಎಂಬುದರ ಬಗ್ಗೆ ಆಯೋಗದ ಕಚೇರಿಗೆ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.

 

ಎಸ್ಸಿಪಿ-ಟಿಎಸ್ಪಿ ಹಣ ದುರುಪಯೋಗಕ್ಕೆ ತಡೆ ಮತ್ತು ಪಾರದರ್ಶಕತೆ:

ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಬಿಡುಗಡೆಯಾಗುವ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಿರುವ ಅಥವಾ ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವ ಯಾವ ಕಾಮಗಾರಿಗಳು ಎಷ್ಟೆಷ್ಟು ವೆಚ್ಚದಲ್ಲಿ ನಡೆದಿವೆ ಎಂಬ ಬಗ್ಗೆ ಸಂಪೂರ್ಣ ಪಾರದರ್ಶಕತೆ ಇರಬೇಕು. ಎಲ್ಲಾ ಪ್ರಗತಿಯಲ್ಲಿರುವ ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಬಳಿ ಕಡ್ಡಾಯವಾಗಿ ನಾಮಫಲಕಗಳನ್ನು ಅಳವಡಿಸಬೇಕು ಎಂದು ಈಗಾಗಲೇ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ" ಎಂದು ಸ್ಪಷ್ಟಪಡಿಸಿದರು.

 

ದೀರ್ಘಕಾಲದಿಂದ ಅರಣ್ಯ ಭೂಮಿ ಅಥವಾ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಭೂ ರಹಿತ ಜನರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಕುರಿತು ಪ್ರಧಾನ ಕಾರ್ಯದರ್ಶಿಗಳು ಈಗಾಗಲೇ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಪರ್ಯಾಯವಾಗಿ ಅವರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

news_1779126185_1_765.webp

 

ಆನ್ ಲೈನ್ ನಲ್ಲಿ ಕುಂದುಕೊರತೆ ಸಲ್ಲಿಸಲು ಶೀಘ್ರ ವ್ಯವಸ್ಥೆ:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಂದ ಬರುವ ದೂರುಗಳು ಹಾಗೂ ಕುಂದುಕೊರತೆಗಳನ್ನು ಮುಂಬರುವ ದಿನಗಳಲ್ಲಿ ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಇವುಗಳನ್ನು ಕಂದಾಯ ಇಲಾಖೆ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಟ್ಟದಲ್ಲಿ ಶೀಘ್ರವಾಗಿ ವಿಲೇವಾರಿ ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಗಳಿಗೂ ನಿಯಮ ಅನ್ವಯಿಸಲಿದ್ದು, ತಾಲೂಕು ಮಟ್ಟದ ಅಧಿಕಾರಿಗಳು ದೂರುಗಳ ಬಗ್ಗೆ ಸಮಗ್ರವಾಗಿ ಚಿಂತನೆ ನಡೆಸಿ, ಯಾವುದೇ ವಿಳಂಬವಿಲ್ಲದೆ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

 

SCP/TSP ಯೋಜನೆಯಡಿ ಅಭಿವೃದ್ಧಿ:

ಕೆಲವು ಕಂದಾಯ ಗ್ರಾಮಗಳಲ್ಲಿ ಸಣ್ಣ ಸಮುದಾಯಗಳು ಹಾಗೂ ಪರಿಶಿಷ್ಟ ಜಾತಿ/ಪಂಗಡಗಳ ಜನರ ಸಂಖ್ಯೆ ಕಡಿಮೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಲಭ್ಯವಿರುವ ಭೂಮಿಯನ್ನು ಗುರುತಿಸಿ, ಕನಿಷ್ಠ 1-2 ಎಕರೆ ಜಾಗವನ್ನು ನೀಡಿ, ಅದನ್ನು SCP ಮತ್ತು TSP ಯೋಜನೆಯಡಿ ಅಭಿವೃದ್ಧಿಪಡಿಸಲು ತಾಲೂಕು ಮತ್ತು ಸಿಇಒ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

 

ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಒಟ್ಟು 42 ಪರಿಶಿಷ್ಟ ಜಾತಿಯ ವಿದ್ಯಾರ್ಥಿ ನಿಲಯ/ವಸತಿ ಶಾಲೆಗಳು ಮತ್ತು 29 ಪರಿಶಿಷ್ಟ ಪಂಗಡದ ನಿಲಯಗಳು ಕಾರ್ಯನಿರ್ವಹಿಸುತ್ತಿವೆಮೆಟ್ರಿಕ್ ಪೂರ್ವದ 22 ನಿಲಯಗಳ ಪೈಕಿ 21 ಸ್ವಂತ ಕಟ್ಟಡ ಹೊಂದಿದ್ದು, ಕೇವಲ 1 ಬಾಡಿಗೆ ಕಟ್ಟಡದಲ್ಲಿದೆ. ಮೆಟ್ರಿಕ್ ನಂತರದ 18 ನಿಲಯಗಳಲ್ಲಿ 13 ಸ್ವಂತ ಕಟ್ಟಡ ಹಾಗೂ 5 ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಬಾಡಿಗೆ ಕಟ್ಟಡಗಳಿಗೆ ಸ್ವಂತ ನಿವೇಶನ ಒದಗಿಸಲು ಈಗಾಗಲೇ ಕೆಎಂಇಆರ್ ಸಿ ಯೋಜನೆಯಡಿ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

 

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಾಂಗದವರು ವಾಸಿಸುವ ಕಾಲೋನಿಗಳಲ್ಲಿ ಸಿ.ಸಿ. ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸೌಕರ್ಯ ಒದಗಿಸಲು ಹೆಚ್ಚಿನ ಆದ್ಯತೆ ನೀಡಬೇಕು. ನಗರ ಸ್ಥಳೀಯ ಸಂಸ್ಥೆಗಳಾದ ಬಳ್ಳಾರಿ ಮಹಾನಗರ ಪಾಲಿಕೆ, ನಗರಸಭೆ ಹಾಗೂ ವಿವಿಧ ಪುರಸಭೆಗಳು ತಮ್ಮ ತೆರಿಗೆ ನಿಧಿಯ ನಿಗದಿತ ಪಾಲನ್ನು ಎಸ್ಸಿ-ಎಸ್ಟಿ ಜನಾಂಗದ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬೇಕು ಎಂದು ತಿಳಿಸಿದರು.

 

ಸಭೆಯಲ್ಲಿ ಆಯೋಗದ ಸದಸ್ಯರುಗಳಾದ ದಿವಾಕರ.ಎನ್., ಗೀತಾ ಥಾವಂಶಿ, ಕಾರ್ಯದರ್ಶಿ  ಡಾ.ಶಿವರಾಮು ಹೆಚ್.ಎಸ್. ಸಂಶೋಧನಾ ಅಧಿಕಾರಿ ಸಿಂಘು ರಘು ಹೆಚ್.ಎಸ್., ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ, ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ