
ವಿಧಾನಸೌಧದಲ್ಲಿ ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಅವರು, ಗೋವಾದ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಹದಾಯಿ ಯೋಜನೆ ಅನುಷ್ಠಾನಗೊಳಿಸಲು ಪರವಾನಿಗೆ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಕೇಂದ್ರದ ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರು ಯಾವುದೇ ಕಾರಣಕ್ಕೂ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಿರುವುದಾಗಿ ಗೋವಾ ಸಿಎಂ ಹೇಳಿದ್ದಾರೆ. ಇದರಿಂದ ಕರ್ನಾಟಕಕ್ಕೆ ಆಘಾತವಾಗಿದೆ. ಅಂತರ್ ರಾಜ್ಯ ಜಲ ವಿವಾದ ಕಾಯ್ದೆ ಅನ್ವಯ ನ್ಯಾಯಾಧೀಕರಣ ರಚನೆ ಆಗಿದ್ದು, ಮಹದಾಯಿ ಯೋಜನೆ ಅನುಷ್ಠಾನಕ್ಕೆ ನ್ಯಾಯಾಧೀಕರಣ ತೀರ್ಪು ನೀಡಿದೆ. ಇದು ಕರ್ನಾಟಕಕ್ಕೆ ಅನ್ವಯವಾಗುತ್ತದೆ. ಇದನ್ನು ಕೇಂದ್ರ ಸರ್ಕಾರವೂ ಅನುಮೋದಿಸಿದೆ. ಕಳಸಾ-ಬಂಡೂರಿ ಯೋಜನೆಗೆ ನ್ಯಾಯಾಧೀಕರಣದ ಎದುರು ಕರ್ನಾಟಕ 7.56 ಟಿಎಂಸಿ ನೀರನ್ನು ಮಲಪ್ರಭಾ ಕಣಿವೆಗೆ ತಿರುಗಿಸಬೇಕೆಂದು ಬೇಡಿಕೆ ಇಟ್ಟಿತ್ತು. ಆಗ 3.9 ಟಿಎಂಸಿ ನೀರನ್ನು ಕರ್ನಾಟಕ ಪಾಲಿಗೆ ಹಂಚಿಕೆ ಮಾಡಲಾಗಿತ್ತು ಎಂದರು.
ಅಂತರ್ ರಾಜ್ಯ ಕಣಿವೆ ತಿರುಗಿಸುವಿಕೆ ರಾಜ್ಯದ ಪರವಾಗಿ ಮಾಡಿಕೊಳ್ಳಲು ಒಪ್ಪಿಗೆ ಪಡೆಯಲಾಗಿದೆ. `ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ' ಕ್ಕೆ ಈ ಕುರಿತು ಅರ್ಜಿ ಸಲ್ಲಿಸಲಾಗಿದೆ. ಒಟ್ಟು 28 ಎಕರೆ ವಿಸ್ತೀರ್ಣದ ಅರಣ್ಯ ಭೂಮಿ ೧೦.೬ ಹೆಕ್ಟೇರ್ ಇದ್ದು, ಈ ಭೂಮಿಯನ್ನು ಸಹ್ಯಾದ್ರಿ ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಬರಲಿದೆ. ಇದನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಗೋವಾ ಆಕ್ಷೇಪಣೆ ವ್ಯಕ್ತಪಡಿಸಿತ್ತು. 2024ರ ಮಾರ್ಚ್ 23 ರಂದು `ರಾಷ್ಟಿçÃಯ ಹುಲಿ ಸಂರಕ್ಷಣಾ ಪ್ರಾಧಿಕಾರ' ವು ಶಿಫಾರಸು ಮಾಡಿದ್ದು, ಈ ಕುರಿತಂತೆ ವನ್ಯ ಜೀವಿ ಮಂಡಳಿಗೆ ಪ್ರಸ್ತಾವನೆ ಹೋಗಿದೆ. ಮಂಡಳಿಯ 78, 79 ಮತ್ತು 80ನೇ ಸಭೆಯಲ್ಲೂ ಈ ಕುರಿತು ಚರ್ಚಿಸಿದಾಗ ನಿರ್ಣಯಕ್ಕೆ ಬರಲಾಗಲಿಲ್ಲ. ಖುದ್ದಾಗಿ ನಾನು ಐದು ಸಭೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೇನೆ. ಗೋವಾ ಸರ್ಕಾರ ವೃಥಾ ಕಾಲಹರಣ ಮಾಡುತ್ತಿದೆ. ಸರ್ವೋಚ್ಛ ನ್ಯಾಯಾಲಯವು ಕಳಸಾ ಬಂಡೂರಿ, ಮಹದಾಯಿ ಯೋಜನೆ ತಡೆಯಲು ಸೂಚಿಸಿಲ್ಲ. ೨೦೨೨ರ ಡಿ.೨೯ರಂದು `ಕೇಂದ್ರ ಜಲ ಆಯೋಗ' ಕಳಸಾ ಬಂಡೂರಿ ಯೋಜನೆಗೆ ಪರಿಷ್ಕೃತ ಯೋಜನೆ ವರದಿ ಕೇಳಿದೆ. ೨೦೨೩ರ ಏ.೧೯ರಂದು ಸರ್ವೋಚ್ಛ ನ್ಯಾಯಾಲಯವು ಗೋವಾದ ಓರಿಜಿನಲ್ ಸೂಟ್ ವಿಲೇವಾರಿ ಮಾಡಿ ಕಳಸಾ ಬಂಡೂರಿ ಯೋಜನೆಗೆ ತಡೆಯಾಜ್ಞೆ ನೀಡುವಂತೆ ಕೋರಿದ್ದನ್ನು ವಜಾ ಮಾಡಿತ್ತು ಎಂದರು.

ಒಟ್ಟಿನಲ್ಲಿ ಇದೊಂದು ಸಂವಿಧಾನಾತ್ಮಕ ಯೋಜನೆ ಆಗಿದ್ದು ಕಕ್ಷೆಯಲ್ಲಿರುವ ಮಹಾದಾಯಿ ಯೋಜನೆಗೆ ಅಡ್ಡಿಪಡಿಸುವುದು ಒಕ್ಕೂಟ ವ್ಯವಸ್ಥೆಗೆ ಅಡ್ಡಿಯನ್ನುಂಟು ಮಾಡಿದೆ. ಕರ್ನಾಟಕದ ರೈತರು, ಜನ, ಜಾನುವಾರುಗಳ ಹಿತವನ್ನು ಪರಿಗಣಿಸಿ ಕರ್ನಾಟಕದ ಮಹತ್ತರವಾದ ಈ ಯೋಜನೆಗೆ ಕೇಂದ್ರ ಸರ್ಕಾರ ರಾಜ್ಯದೊಂದಿಗೆ ಸಹಕರಿಸಬೇಕು. ಕರ್ನಾಟಕ ಪರ್ಯಯವಾಗಿ ಗೋವಾ ರಾಜ್ಯಕ್ಕೆ ಹತ್ತು ಹಲವು ರೀತಿಯಲ್ಲಿ ನೆರವು ನೀಡಿದ್ದನ್ನು ಮರೆಯಬಾರದು. ಈ ಕುರಿತು ಉಪ ಮುಖ್ಯಮಂತ್ರಿಗಳು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಹದಾಯಿ, ಕಳಸಾ ಬಂಡೂರಿ ವಿಷಯವಾಗಿ ಸದನದಲ್ಲಿ ಚರ್ಚೆ ಮಾಡಿ ಮುಂದಿನ ನಿರ್ಧಾರ ಪ್ರಕಟಿಸುತ್ತೇವೆ ಎಂದರು.