LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಒಳ್ಳೆಯ ಆರೋಗ್ಯಕ್ಕೆ ಉತ್ತಮ ಆಹಾರ ಪದ್ಧತಿ ಅಗತ್ಯ

ಬಳ್ಳಾರಿ: ನಾವು ಸದಾ ಚಟುವಟಿಕೆಯಿಂದ ಇರಲು ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕೆಂದು ಮಾಜಿ ಸಚಿವರಾದ ಬಿ.ಶ್ರೀರಾಮುಲು ಹೇಳಿದರು.

 

ಇಲ್ಲಿನ ಬಂಡಿಮೋಟ್ ಪ್ರದೇಶದ ಎಪಿಎಂಸಿ ವೃತ್ತದಲ್ಲಿರುವ ಉಜ್ಜನಿ ಶಾಲೆಯಲ್ಲಿ ಫಾದರ್ಸ್ ಕೇರ್ ಫೌಂಡೇಷನ್ ಮತ್ತು ಅಮ್ಮ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ  ಮಾತನಾಡಿದ ಅವರು, ನಾವು ಆರೋಗ್ಯ ಲೆಕ್ಕಿಸದೇ ದುಡಿಯುತ್ತೇವೆ. ಆದರೆ ಅರೋಗ್ಯ ಕೈಕೊಟ್ಟಾಗ ದುಡಿದ ಹಣ ಒಯ್ದು ಸುರಿಯುತ್ತೇವೆ. ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಾಘಾತದಂತಹ ರೋಗಗಳು ಹೆಚ್ಚುತ್ತಿವೆ. ಆರೋಗ್ಯದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು.

 

ಕೆಲಸದ ಒತ್ತಡದ ನಡುವೆಯೂ ನಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯದಿಂದರೆ ದೈನಂದಿನ ಚಟುವಟಿಕೆಗಳಲ್ಲಿ ಉಲ್ಲಾಸದಿಂದ ತೊಡಗಿಸಿಕೊಳ್ಳಲು ಸಾಧ್ಯ. ಯೋಗ, ಧ್ಯಾನ, ಪ್ರಾಣಾಯಾಮ ರೂಢಿಸಿಕೊಳ್ಳಬೇಕು.  ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೆಲವು ಸಂದರ್ಭದಲ್ಲಿ ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಕುಟುಂಬಕ್ಕಾಗಿ ಶ್ರಮಿಸುತ್ತಾರೆ. ಹಾಗಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಉಂಟಾಗಬಹುದಾದ ಅಪಾಯದಿಂದ ದೂರ ಇರಬೇಕೆಂದು ಶ್ರೀರಾಮುಲು ಹೇಳಿದರು.



ಶಿಬಿರದಲ್ಲಿ ಬಿಪಿ, ಸಕ್ಕರೆ ಕಾಯಿಲೆ, ಕಿಡ್ನಿ, ಹೃದಯ ಸಂಬಂಧಿ ಸೇರಿದಂತೆ ಹಲವು ರೀತಿಯ ತಪಾಸಣೆಗಳನ್ನು ಉಚಿತವಾಗಿ  ನಡೆಸಿ ಸಾರ್ವಜನಿಕರಿಗೆ ಮಹಾ ಉಪಕಾರವನ್ನು ಈ ಅಮ್ಮ ಟ್ರಸ್ಟ್ ನವರು ಮಾಡಿದ್ದಾರೆ ಎಂದು ಹೇಳಿದರು.

 

ಈ ವೇಳೆ ಮುಖಂಡರಾದ ಬಂಬಂ ದಾದ, ಕಣೇಕಲ್ಲು ಮಹೆಬೂಬ್ ಸಾಬ್, ಬಂಡಿಮೋಟ್ ವಿ.ಗಾದಿಲಿಂಗ, ಟ್ರಂಕ್ ನೂರ್, ಅಂಜುಂ ಭಾಷ, ತಿಮ್ಮಪ್ಪ, ಗುಜರಿ ಅಜೀಜ್, ಗುಗ್ಗರಹಟ್ಟಿ ರಾಮಾಂಜನಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ