LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸತ್ಯ ಮತ್ತು ಅಹಿಂಸೆ ಮಾರ್ಗದಿಂದ ಸ್ವಾತಂತ್ರ್ಯ ಸಿಕ್ಕಿದೆ

ನಾಯಕನಹಟ್ಟಿ : ಸತ್ಯ ಮತ್ತು ಅಹಿಂಸೆ ಮಾರ್ಗದಿಂದ ನಾವು ಸ್ವಾತಂತ್ರ್ಯ ವನ್ನು

ಪಡೆದುಕೊಂಡಿದ್ದೇವೆ ಎಂದು ಬೆಳಗಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಶ್ರೀ ಪಾಲಯ್ಯ ಹೇಳಿದರು.

 

ಸಮೀಪದ ಬೆಳಗಟ್ಟ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯದಿನಾಚರಣೆಯನ್ನು ಧ್ವಜರೋಹಣ ನೆರವೇರಿಸಿ ನಂತರ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಅಗ್ರ ಗಣ್ಯರಾಗಿ ಉಳಿದಿದ್ದು ಮಹಾತ್ಮ ಗಾಂಧೀಜಿ, ತಮ್ಮ ಅಹಿಂಸಾತ್ಮಕ ಹೋರಾಟದ ಮೂಲಕ ಶತ ಶತಮಾನಗಳ ಕಾಲ ಭಾರತವನ್ನು ಆಳ್ವಿಕೆ ಮಾಡಿದ ಬ್ರಿಟೀಷರನ್ನು ದೇಶ ಬಿಟ್ಟು ಹೋಗುವಂತೆ, ಭಾರತವನ್ನು ಬ್ರಿಟೀಷರ ದಾಸತ್ವದಿಂದ ಬಿಡುಗಡೆ ಮಾಡಿದ ಹೋರಾಟಗಾರರು ಎಂದರು.



ಈ ಸಂದರ್ಭದಲ್ಲಿ ಉಪಸ್ಥಿತರಾದ ಬೆಳಗಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಶ್ರೀ ಪಾಲಯ್ಯ, ಉಪಾಧ್ಯಕ್ಷ ರಾಮಚಂದ್ರರೆಡ್ಡಿ, ಬೆಳಗಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶಲಾಕ್ಷಿ, ಸದಸ್ಯರಾದ ಕಮಲಮ್ಮ, ರತ್ನಕ್ಕ, ಚಿತ್ತಮ್ಮ, ಎಸ್.ಡಿ.ಎಂ.ಸಿ ಅಧ್ಯಕ್ಷ ಬೋರೆಶ್, ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST