LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಟನ್ ಕಬ್ಬಿಗೆ 3300 ರೂ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು : ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ 3300 ರೂ ಕೊಡಲು ನಿರ್ಧರಿಸಿದೆ.

 

ಸತತ ಏಳು ಗಂಟೆಗಳ ನಿರಂತರ ಸಭೆ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದರು.

 

ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.

 

ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ.

ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಕೇಂದ್ರ ಸರ್ಕಾರದ FRP ದರ ವಿರೋಧಿಸಿ ಇನ್ನೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ.



ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ. ಪ್ರತಿಭಟನಾ

 

10.25 ಇಳುವರಿ ಇರುವ ಕಬ್ಬಿಗೆ 3100 ರೂ, 11.25 ಇಳುವರಿ ಕಬ್ಬಿಗೆ 3200 ರೂ ಕೊಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಭಟನಾ ರೈತರು ಒಪ್ಪಿಲ್ಲ. ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ರಾದ, ಸಕ್ಕರೆ ಸಚಿವರಾದ ಶಿವಾನಂದ ಪಾಟೀಲರು ಮತು ಕತೆ ನಡೆಸಿದರೂ ರೈತರು ಒಪ್ಪಿಲ್ಲ. ಬಳಿಕ ಕ್ಯಾಬಿನೆಟ್ ನಲ್ಲಿ ಚರ್ಚಿಸಿ, "ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸುವ ಜೊತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದರು.

 

ಕ್ಯಾಬಿನೆಟ್ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದರು.

 

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ