LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪದವಿ ಪ್ರವೇಶಾತಿ ಅಭಿಯಾನ: ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ದಾರಿ ದರ್ಶನ

 ದಾವಣಗೆರೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ವತಿಯಿಂದ ಕಕ್ಕರಗೊಳ್ಳದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪ್ರವೇಶಾತಿ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ರಾಜ್ಯ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆ ಆದೇಶದಂತೆ “ಪ್ರವೇಶಾತಿ ಅಭಿಯಾನ”ವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಬಿ ಸಿ ತಹಸಿಲ್ದಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ   ಡಾ. ವೆಂಕಟೇಶ್ ಬಾಬು ಅವರು ಮಾತನಾಡುತ್ತಾ ಪದವಿ ಶಿಕ್ಷಣದ ಮಹತ್ವ, ಉದ್ಯೋಗಾವಕಾಶಗಳು, ಉನ್ನತ ಅಧ್ಯಯನದ ಸಾಧ್ಯತೆಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪದವಿ ಶಿಕ್ಷಣದ ಪಾತ್ರದ ಕುರಿತು ವಿವರವಾಗಿ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪದವಿ ಕೋರ್ಸ್‌ಗಳನ್ನು ಆಯ್ಕೆ ಮಾಡುವಾಗ ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ವೃತ್ತಿ ಗುರಿಗಳನ್ನು ಪರಿಗಣಿಸಬೇಕೆಂದು ಅವರು ಸಲಹೆ ನೀಡಿದರು.

ಅಭಿಯಾನದ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ದರ್ಜೆ ಕಾಲೇಜಿನಲ್ಲಿ ಲಭ್ಯವಿರುವ ವಾಣಿಜ್ಯ, ವಿಜ್ಞಾನ ಮತ್ತು ಕಲಾ ವಿಭಾಗಗಳ ಪದವಿ ಕೋರ್ಸ್‌ಗಳು, ಪಠ್ಯಕ್ರಮ, ಬೋಧನಾ ಸೌಲಭ್ಯಗಳು, ಗ್ರಂಥಾಲಯ, ಪ್ರಯೋಗಾಲಯ, ವಿದ್ಯಾರ್ಥಿವೇತನ, ಹಾಸ್ಟೆಲ್ ವ್ಯವಸ್ಥೆ ಹಾಗೂ ಇತರ ಶೈಕ್ಷಣಿಕ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪದವಿ ಪ್ರವೇಶ ಪಡೆಯುವಂತೆ ಪ್ರೇರೇಪಿಸಲಾಯಿತು.



ಈ ಕಾರ್ಯಕ್ರಮದಲ್ಲಿ ವಿಜ್ಞಾನ ವಿಭಾಗದಿಂದ ಪ್ರೊ ಬಸವರಾಜ್, ಕನ್ನಡ  ಅಧ್ಯಾಪಕ  ರವಿ ಕುಮಾರ್ ಪ್ರೊ ಸಂಗಪ್ಪ,   ಪ್ರೊಗುರುದೇವ  ಹಾಗೂ ಕಕ್ಕರಗೊಳ್ಳದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಅಧ್ಯಾಪಕರು ಮತ್ತು ಪ್ರಾಂಶುಪಾಲರು ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನಕ್ಕೆ ಸಹಕಾರ ನೀಡಿದರು.

ಕಾರ್ಯಕ್ರಮದ ಕೊನೆಯಲ್ಲಿ, ವಿದ್ಯಾರ್ಥಿಗಳು ಉನ್ನತ ಶಿಕ್ಷಣದತ್ತ ಹೆಚ್ಚಿನ ಆಸಕ್ತಿ ತೋರಿಸಿದ್ದು, ಮುಂದಿನ ಶೈಕ್ಷಣಿಕ ಪ್ರವೇಶಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಈ ರೀತಿಯ ಅಭಿಯಾನಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗಿವೆ ಎಂದು ಸಂಘಟಕರು ಅಭಿಪ್ರಾಯಪಟ್ಟರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST