ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚನ್ನಬಸಯ್ಯನಹಟ್ಟಿ ಗ್ರಾಮದ ಬಳಿ ಸೋಮವಾರ ಘಟನೆ ನಡೆದಿದ್ದು ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನ ಚಿಕಿತ್ಸೆಗೆಂದು ಆಸ್ಪತ್ರೆಗೆ ಧಾಖಲಿಸಲಾಗಿದೆ.
ಕಲ್ಲೇದೇವರಪುರ ಬಸಪ್ಪನಹಟ್ಟಿ ಗ್ರಾಮದ ಕುಟುಂಬವೊಂದು ಬಾಡಿಗೆ ಕಾರು ಪಡೆದು ಓಬನಹಳ್ಳಿ ಗ್ರಾಮದ ದೇವಸ್ಥಾನಕ್ಕೆ ಹೊರಟಿದ್ದರು. ಕಾರು ಚನ್ನಬಸಯ್ಯನಹಟ್ಟಿ ಗ್ರಾಮದ ಬಳಿ ಬಂದಾಗ ಎದುರಿನಿಂದ ಬಂದ ಇನ್ನೊಂದು ಕಾರು ಈ ಕಾರಿಗೆ ಡಿಕ್ಕಿ ಹೊಡೆದು ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡು ಕಾರುಗಳು ಜಖಂ ಗೊಂಡಿದ್ದು ಎರಡು ಕಾರುಗಳಲ್ಲಿದ್ದ 11 ಜನರ ಪೈಕಿ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯರು ಉಪಚರಿಸಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆಂದು ಅಂಬುಲೆನ್ಸ್ ಮೂಲಕ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಇನ್ನೂ ಗಾಯಾಳುಗಳಿಗೆ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ನಾಯಕನಹಟ್ಟಿ ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಈ ಸಂಬಂದ ಪ್ರಕರಣ ಧಾಖಲಿಸಿಕೊಂಡಿದ್ದಾರೆ