ನಾಯಕನಹಟ್ಟಿ : ಸತತ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದುತ್ತಿರುವ ಮುಖ್ಯ ಶಿಕ್ಷಕಿ ಎನ್. ಇಂದಿರಮ್ಮ ಅವರಿಗೆ ಆರೋಗ್ಯ, ಆಯಸ್ಸು, ಶಾಂತಿ, ನೆಮ್ಮದಿ ಸಿಗಲಿ ಎಂದು ಆ ದೇವರಲ್ಲಿ ಬೇಡಿಕೊಳ್ಳುವೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳಶ್ರೀಕಾ0ತ್ ಹೇಳಿದರು.
ಪಟ್ಟಣದ ಶುಕ್ರವಾರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ನಿವೃತ್ತಿ ಹೊಂದುತ್ತಿರುವ ಮುಖ್ಯ ಶಿಕ್ಷಕಿ ಶ್ರೀಮತಿ ಎನ್. ಇಂದಿರಮ್ಮ ಇವರಿಗೆ ಸೇವಾ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು ಇವರ ಕೈಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ಮಾಡಿ ಸಮಾಜದಲ್ಲಿ ಉತ್ತಮ ಸ್ಥಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಎಷ್ಟೇ ಎತ್ತರಕ್ಕೆ ಬೆಳೆದರೂ ಪ್ರಾಥಮಿಕ ಶಾಲೆಯಲ್ಲಿ ಇವರು ಕಲಿಸಿದ ಪಾಠವನ್ನು ಜೀವನ ಪರ್ಯಂತ ಮರೆಯಲಾಗುವುದಿಲ್ಲ ಎಂದರು.
ಅತ್ಯಂತ ಶಿಸ್ತಿನ ಮುಖ್ಯ ಶಿಕ್ಷಕಿ ಎಂದರೆ ಮಕ್ಕಳಿಗೆ ಅಚ್ಚು-ಮೆಚ್ಚು ಅಲ್ಲದೇ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅತ್ಯಂತ ಪ್ರೀತಿ ಪಾತ್ರದ ಶಿಕ್ಷಕಿಯಾಗಿದ್ದರು. ಶಾಲೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟು ಪ್ರತೀ ವರ್ಷ ಶಾಲೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ನೋಡಿಕೊಳ್ಳುತ್ತಿದ್ದರು. 38 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವುದು ಶ್ಲಾಘನಿಯ ಸಾಧನೆ, ಮುಂದೆಯು ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಅನ್ವರ್ರವರು ಮಾತನಾಡಿ ತಮ್ಮ ಸೇವಾ ಅವಧಿಯಲ್ಲಿ ಸಹಕಾರ ಮನೋಭಾವದಿಂದ ಕಾರ್ಯನಿರ್ವಹಿಸಿ ಸುಮಾರು 38ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ್ದಾರೆ. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಆರೈಸಿದರು.
ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಬಸಪ್ಪನಾಯಕ ಮಾತನಾಡಿ ಮುಖ್ಯ ಶಿಕ್ಷಕಿ ಇಂದಿರಮ್ಮ ಇಲಾಖೆಗೆ ಸಲ್ಲಿಸಿದ ಸೇವೆ ಅನನ್ಯ ಅನುಭವಿ ಶಿಕ್ಷಕಿಯನ್ನು ಕಳೆದುಕೊಳ್ಳುವುದು ದುಖಃಕರವಾದರು ಕುಟುಂಬದವರೊ0ದಿಗೆ ಅವರು ಸಂತೋಷದ ನಿವೃತ್ತಿ ಜೀವನ ನಡೆಸಲಿ. ಸರ್ಕಾರಿ ಹುದ್ದೆಯಲ್ಲಿ ವಯೋನಿವೃತ್ತಿಯಾಗುವುದು ಸಹಜವಾದರು ಶಿಕ್ಷಕಿ ವೃತ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಎಲ್ಲಾರೊಂದಿಗೆ ಆತ್ಮಯತೆಗೊಳಿಸಿದ್ದು ಇತರರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್, 11ನೇ ವಾರ್ಡಿನ ಪಟ್ಟಣ ಪಂಚಾಯಿತಿ ಸದಸ್ಯೆ ಪಾಪಮ್ಮ, 5ನೇ ವಾರ್ಡಿನ ಪಟ್ಟಣ ಪಂಚಾಯಿತಿ ಸದಸ್ಯೆ ಸುನಿತಾ ಮುದಿಯಪ್ಪ, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಅನ್ವರ್, ಎಂ.ವೈ.ಟಿ.ಸ್ವಾಮಿ, ಎಸ್.ಟಿ.ಎಸ್.ಆರ್ ಮುಖ್ಯ ಶಿಕ್ಷಕರಾದ ಬಿ.ರಮೇಶ್, ವಿವಿಧ ಶಾಲೆಯ ಶಿಕ್ಷಕ, ಶಿಕ್ಷಕಿಯರು, ಹಳೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸರ್ಕಾರಿ ಮಾದರಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಹೂವಿನ ಹಾರ ಹಾಕುವ ಮೂಲಕ ಬಿಳ್ಕೊಡಿಗೆ ಕೊಟ್ಟರು.