ಕೊಪ್ಪಳ : ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಹಿನ್ನಲೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಶುಕ್ರವಾರ ಸಂಜೆ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಶಾಸಕ ಹಿಟ್ನಾಳ ಆರಂಭಿಕ ಹೆಜ್ಜೆಯಾಗಿ ರಾಬಕೊವಿ ಒಕ್ಕೂಟದ ಅಧ್ಯಕ್ಷರಾಗಿ ಮುಂದೆ ಕೆಎಂಎಫ್ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದಕ್ಕೆ ಬೇಕಾದ ವೇದಿಕೆಯನ್ನು ಸಿದ್ಧಪಡಿಸಿಕೊಳ್ಳುವ ಭಾಗವಾಗಿಯೇ ರಾಜ್ಯದ ವಿವಿಧ ಹಾಲು ಒಕ್ಕೂಟಗಳಲ್ಲಿರುವ ಆಪ್ತರನ್ನು ಕೆಎಂಎಫ್‌ಗೆ ಎಂಟ್ರಿ ಮಾಡಲಾಗುತ್ತಿದೆ ಎಂದು ಆಪ್ತ ವಲಯದಲ್ಲಿ ಕೇಳಿ ಬರುತ್ತಿದೆ.
ವಿಶೇಷವಾಗಿ ಮೊದಲ ಬಾರಿಗೆ ಅದ್ಯಕ್ಷರಾದ ಹಿನ್ನೆಲೆಯಲ್ಲಿ ಮಗ ಕೆ ಸುದಶರ್ಶನ ಮತ್ತು ಕುಟುಂಬ ಜೋತೆ ದೇವಿ ದರ್ಶನ ಪಡೆದ ಹಿಟ್ನಾಳ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಕೂತೂಹಲ ಮೂಡಿಸಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ದೇವಸ್ಥಾನದ ಸಮಿತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮುಖಂಡರಾದ ವೆಂಕಟೇಶ್ ಕಂಪಸಾಗರ್,ಪಾಲಕ್ಷಪ್ಪ ಗುಂಗಾಡಿ,ಅನೀಲ್, ಈರಣ್ಣ.ಈ, ಹನುಮಂತಪ್ಪ ಹ್ಯಾಟಿ, ನಾಗರತ್ನ ಪೂಜಾರ,ನಾಗರಾಜ್ ನರೆಗಲ್,ಶಿವು ದಳಪತಿ ಹುಲುಗಪ್ಪ ಹೊಟ್ಟಿ, ಹನುಮಂತ ಗಿಡ್ಡಾಲಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.