ನಾಯಕನಹಟ್ಟಿ : ಪಟ್ಟಣ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಶ್ವೇತ ರವಿಕುಮಾರ್ ಮತ್ತು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಜೆ.ಆರ್.ರವಿಕುಮಾರ್ ರವರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಪ.ಪಂ ಅಧ್ಯಕ್ಷೆ ಮಂಜುಳ ಶ್ರೀಕಾಂತ್ ಹಾಗೂ ಉಪಾಧ್ಯಕ್ಷೆ ಬೋಸಮ್ಮ ಮಂಜುನಾಥ ಮತ್ತು ಸರ್ವ ಸದಸ್ಯರುಗಳು ಸೇರಿ ಸನ್ಮಾನಿಸಲಾಯಿತು.
ನಂತರ ಪಟ್ಟಣ ಪಂಚಾಯಿತಿ ಸದಸ್ಯ ಜೆ.ಆರ್.ರವಿಕುಮಾರ್ ಮಾತನಾಡಿ ಸರ್ವರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.