LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕೌಶಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ: ಪ್ರೊ.ಎಂ.ಮುನಿರಾಜು

ಬಳ್ಳಾರಿ: ಹೈದರಾಬಾದ್ ಕರ್ನಾಟಕದಲ್ಲಿ ಕೌಶಲ್ಯ ಆಧಾರಿತ ಶಿಕ್ಷಣ ಸಂಸ್ಥೆಗಳು ಅಭಿವೃದ್ಧಿಯಾಗಬೇಕು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಹೇಳಿದರು.



ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಬದುಕು ಸೆಂಟರ್ ಫಾರ್ ಲೈವಿಲಿಹುಡ್ಸ್ ಲರ್ನಿಂಗ್, ಬೆಂಗಳೂರು ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಕನ್ನಡ ಅಧ್ಯಯನ ವಿಭಾಗದ ಸಂಯುಕ್ತ ಆಶ್ರಯದಲ್ಲಿ ‘ಸಮೂಹ ಸಂವಹನ ಮತ್ತು ಕನ್ನಡ’ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್.ರುದ್ರೇಶ್ ಮಾತನಾಡಿ, ಸಾಹಿತ್ಯವು ಓದುಗರ ಬದುಕನ್ನು ಕಟ್ಟಿಕೊಳ್ಳವ ಕೆಲಸ ಮಾಡುತ್ತದೆ. ಸಾಹಿತ್ಯವನ್ನು ಅರಗಿಸಿಕೊಂಡು ಬೆಳೆದಷ್ಟು ವಿದ್ಯಾರ್ಥಿಗಳು ಅಭಿವೃದ್ದಿ ಹೊಂದುತ್ತಾರೆ. ವಿದ್ಯಾರ್ಥಿಗಳಿಗೆ ಗುರಿಯೊಂದೇ ಮುಖ್ಯವಲ್ಲ, ಗುರಿಯ ಜೊತೆಗೆ ಮಾರ್ಗವು ಮುಖ್ಯವಾಗಿರುತ್ತದೆ ಎಂದು ಹೇಳಿದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಜಿ.ಕೆ. ಸಂತೋಷ್ ಪ್ರಾಸ್ತಾವಿಕವಾಗಿ ಮಾತನಾಡಿದರು.



ಈ ಸಂದರ್ಭದಲ್ಲಿ ಬದುಕು ಸೆಂಟರ್ ಫಾರ್ ಲೈವಿಲಿಹುಡ್ಸ್ ಲರ್ನಿಂಗ್, ಬೆಂಗಳೂರು ಮಾಧ್ಯಮ ಅಧ್ಯಾಪಕರು ಹಾಗೂ ಲೇಖಕರಾದ ದಯಾನಂದ, ಕಲಾ ನಿಕಾಯದ ಡೀನರಾದ ಪ್ರೊ. ರಾಬರ್ಟ್ ಜೋಸ್, ಪ್ರದರ್ಶನ ಕಲೆ ನಾಟಕ ವಿಭಾಗದ ಮುಖ್ಯಸ್ಥರಾದ ಪ್ರೊ. ಎನ್. ಶಾಂತನಾಯ್ಕ್, ಡಾ. ಕೆ. ಎಸ್ ಶೀವಪ್ರಕಾಶ ವೇದಿಕೆ ಮೇಲೆ ಉಪಸ್ಥಿತರಿದ್ದರು.

ವಿವಿಯ ಕನ್ನಡ ಅಧ್ಯಯನ ವಿಭಾಗದ ಉಪನ್ಯಾಸಕರಾದ ಡಾ. ಆರನಕಟ್ಟೆ ರಂಗನಾಥ ನಿರೂಪಿಸಿದರು. ಡಾ. ಶಕೀಲಾ ಕೆ ವಂದಿಸಿದರು. ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ