ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣ ಕಾರ್ಯಕ್ರಮ ಹಾಗೂ ಸೈಟ್ ಸೇವರ್ ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ಗೋವಿಂದರಾಜನಗರದ ಎಂ.ಸಿ ಲೇಔಟ್ ನಲ್ಲಿ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಶಾಕಿರಣ ದೃಷ್ಟಿ ಕೇಂದ್ರವನ್ನು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಉದ್ಘಾಟಿಸಿದರು.
ಸ್ಥಳೀಯ ಶಾಸಕ ಪ್ರಿಯಾ ಕೃಷ್ಣ, ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕ ಅವಿನಾಶ್ ಮೆನನ್ ರಾಜೇಂದ್ರನ್, ಮದನಿ ಮತ್ತಿತರರು ಉಪಸ್ಥಿತರಿದ್ದರು.