ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜರೋಹಣವನ್ನು ಪ.ಪಂ ಅಧ್ಯಕ್ಷೆ ಮಂಜುಳ ಶ್ರೀಕಾಂತ್ ನೆರವೇರಿಸಿದರು.

ನಂತರ ಮಾತನಾಡಿ ಅವರು ಸ್ವಾತಂತ್ರ್ಯ ದಿನಾಚರಣೆ ನಮ್ಮ ದೇಶದ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನವಾಗಿದೆ. ಆಗಸ್ಟ್ 15ರಂದು ಪ್ರತಿ ವರ್ಷ ನಾವು ಅದ್ಧೂರಿಯಾಗಿ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸುತ್ತಾ ಬಂದಿದ್ದೇವೆ. ಸ್ವಾತಂತ್ರ್ಯ ದಿನದಂದು ಹೋರಾಟಗಾರರ ತ್ಯಾಗ ಮತ್ತು ಬಲಿದಾನವಾಗಿದೆ. ನಮಗೆ ಬ್ರಿಟೀಷರಿಂದ ಆಗಸ್ಟ್ 15ರ ಮಧ್ಯರಾತ್ರಿ ನಮಗೆ ಸ್ವಾತಂತ್ರ್ಯ ದೊರಕಿದೆ ಸರ್ವರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.
ಇದೇ ಸಂದರ್ಭದಲ್ಲಿ ಪಟ್ಟಣದ ಹಿರಿಯ ನಾಗರೀಕರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಬೋಸಮ್ಮ ಮಂಜುನಾಥ, ಮಾಜಿ ಉಪಾಧ್ಯಕ್ಷೆ ಸರ್ವಮಂಗಳ ಉಮಾಪತಿ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ.ತಿಪ್ಪೇಸ್ವಾಮಿ, ಸದಸ್ಯರಾದ ಜೆ.ಆರ್.ರವಿಕುಮಾರ್, ಅಬಕಾರಿ ತಿಪ್ಪೇಸ್ವಾಮಿ, ಸೈಯದ್ ಅನ್ವರ್, ಸುನೀತ ಮುದಿಯಪ್ಪ, ಮಹೇಶ್ವರಮ್ಮ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಶ್ರೀಕಾಂತ್ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಶ್ರೀನಿವಾಸ್ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಇನ್ನೂ ಮುಂತಾದವರು ಇದ್ದರು.