ಮಹಾಸ್ವಾಮಿಗಳ ಭಾವಚಿತ್ರಕ್ಕೆ ಹೂವು ಅರ್ಪಿಸಿ, ಪೂಜೆ ಸಲ್ಲಿಸುವುದರ ಮೂಲಕ ಅವರ ಸ್ಮರಣೆ ಹಾಗೂ ಅವರ ಆಧ್ಯಾತ್ಮಿಕ ಮತ್ತು ಸಾಮಾಜಿಕ ಕೊಡುಗೆಗಳ ಕುರಿತು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪಲ್ಲೇದ ಪ್ರಭುಲಿಂಗ, ಪ್ರಾಂಶುಪಾಲರಾದ ಬಿ.ಶ್ರೀಶೈಲಗೌಡ, ಆರ್ ವೈ ಎಂ.ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಮಹಾಬಲೇಶ್ವರ ಗೌಡ ಒಳಗೊಂಡಂತೆ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗದವರು ಇದ್ದರು.