LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಮೇ 21 ರಂದು ಮೋಕಾದಲ್ಲಿ ಉದ್ಯೋಗ ಮೇಳ

ಬಳ್ಳಾರಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಮೇ 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮೋಕಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಾರಿಗೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ

ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ಪ್ರಮುಖ ಕಂಪನಿಗಳು ಭಾಗವಹಿಸುತ್ತಿದ್ದು, ಇದರಲ್ಲಿ ಪ್ರಮುಖವಾಗಿ ಸ್ಥಳೀಯ ಕಂಪನಿಗಳು ಸಹ ಪಾಲ್ಗೊಳ್ಳಲಿವೆ. ಕಂಪನಿಗಳು ತಮ್ಮಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ.

ಅರ್ಹತೆ ಮತ್ತು ವಯೋಮಿತಿ:

ಎಸ್.ಎಸ್.ಎಲ್.ಸಿ., ಪಿ.ಯು.ಸಿ., .ಟಿ.., ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಮುಗಿಸಿರುವ 18 ರಿಂದ 40 ವರ್ಷ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ವಿದ್ಯಾರ್ಹತೆಯ ಸ್ವ-ವಿವರಗಳ ಪ್ರತಿಯೊಂದಿಗೆ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762, 7676774293, 9663263086, 6360408094 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ