ಸುರಪುರ : ಸುರಪುರದ ನ್ಯಾಯಾಂಗ ಇಲಾಖೆಯ ಸಿಬ್ಬಂದಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮಟ್ಟದ ಆಯ್ಕೆಯಾಗಿದ್ದಾರೆ.
ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಯಾದಗಿರಿ ವತಿಯಿಂದ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಎರಡು ದಿನಗಳವರೆಗೆ ಜರುಗಿದ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಸುರಪುರ ನ್ಯಾಯಾಂಗ ಇಲಾಖೆಯ ಸಿಬ್ಬಂದಿಗಳಾದ ತಿರುಪತಿ 800 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಆಕಾಶ ಶಟಲ್ ಬ್ಯಾಡ್ಮಿಂಟನ್ (ಡಬಲ್ಸ್) ನಲ್ಲಿ ದ್ವಿತೀಯ ಸ್ಥಾನ ಹಾಗೂ ಸೈಯದ್ ಅಲಿ ಎತ್ತರ ಜಿಗಿತದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನಪಡೆದು ಮೂವರು ಸಿಬ್ಬಂದಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನ್ಯಾಯಾಂಗ ಇಲಾಖೆಯ ಸಿಬ್ಬಂದಿಗಳ ಸಾಧನೆಗೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಫಕೀರವ್ವ ಕುಳಗೇರಿ, ಶಿರಸ್ತೇದಾರರಾದ ಯಮುನಪ್ಪ ಹಾಗೂ ಸಿಬ್ಬಂದಿಗಳು ಮತ್ತು ಸ್ನೇಹಿತರು ಶುಭ ಹಾರೈಸಿದ್ದಾರೆ.