LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ

ಬೇಡರೆಡ್ಡಿ ಹಳ್ಳಿ ಗ್ರಾಮ ಪಂಚಾಯಿತಿ ಕೊಂಡಿರುವ ಪರಿಕರಗಳ ಬಿಲ್ ಪಾವತಿಸುವಂತೆ ಒತ್ತಾಯ

ಚಳ್ಳಕೆರೆ: ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿಗೆ ಶ್ರೀ ವೆಂಕಟೇಶ್ವರ ಟ್ರೈಡರ್ಸ್ ಮಾಲೀಕರು ಸರಬರಾಜು ಮಾಡಿರುವ ಕುಡಿಯುವ ನೀರು ಹಾಗೂ ಬೀದಿ ದೀಪದ ಬಿಡಿಭಾಗಗಳ 7,46,915 ಬಿಲ್ ಪಾವತಿಸದೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒ ನಿರ್ಲಕ್ಷ ವಹಿಸಿದ್ದಾರೆ ಎಂದು ಆರೋಪಿಸಿ ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

 

ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬೇಡರಹಳ್ಳಿ ಬಸವ ರೆಡ್ಡಿ ಶ್ರೀ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕರು ಗ್ರಾಮ ಪಂಚಾಯಿತಿಗೆ ಸರಬರಾಜು ಮಾಡಿರುವ ಬಿಡಿಭಾಗಗಳ ಹಣದ ಬಾಪ್ತನ್ನು ಬಿಡುಗಡೆಗೊಳಿಸುವಂತೆ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಹಾಗೂ ಪಿಡಿಓಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಅಂಗಡಿ ಮಾಲೀಕರು ಸಾಲ ಮಾಡಿ ಸಾಮಾನುಗಳನ್ನು ಖರೀದಿಸಿ ಗ್ರಾಮ ಪಂಚಾಯಿತಿಗೆ ನೀಡಿದ್ದಾರೆ ಆದರೂ ಸಹ ಬಾಕಿ ಉಳಿಸಿಕೊಂಡಿರುವುದರಿಂದ ಇಂದು ಅಂಗಡಿ ಮಾಲೀಕರು ವಿಷ ಸೇವಿಸುವಂತೆ ಆಗಿದೆ. ಕೂಡಲೇ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿ ಸತ್ಯ ಸತ್ಯತೆ ತಿಳಿಯಲು ಅಧಿಕಾರಿಗಳು ಎಲ್ಲಾ ಪಕ್ಷದ ರಾಜಕಾರಣಿಗಳು ಪ್ರಗತಿಪರ ರೈತ ಸಂಘಟನೆಗಳ ಮುಖಂಡರ ಒಳಗೊಂಡ ಸತ್ಯಶೋಧನ ಸಮಿತಿ ರಚನೆ ಮಾಡಿ ಬೇಡರೆಡ್ಡಿಹಳ್ಳಿ ಬಂಜೆಗೆರೆ ಗ್ರಾಮಗಳಲ್ಲಿ ಆಗಿರುವ ಅಭಿವೃದ್ಧಿ ಖರ್ಚು ವೆಚ್ಚಗಳ ಬಗ್ಗೆ ತನಿಖೆ ನಡೆಸಿ ಗ್ರಾಮಸ್ಥರಿಗೆ ಹಾಗೂ ತಾಲೂಕಿನ ಜನತೆಗೆ ಸತ್ಯ ತಿಳಿಸಬೇಕು ಎಂದು ಆಗ್ರಹಿಸಿದರು.



ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ