LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ

ಬೆಂಗಳೂರು: ರಾಜ್ಯದಲ್ಲಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯಲೋಪ, ದುರ್ನಡತೆ, ಗಂಭೀರ ದುರ್ನಡತೆ, ಪೊಲೀಸ್ ಕಸ್ಟಡಿಯಲ್ಲಿ ಸಾವು (ಲಾಕ್ ಅಪ್ ಡೆತ್) ಅಧಿಕಾರ ದುರ್ಬಳಕೆ, ಅವಾಚ್ಯ ಶಬ್ದಗಳಿಂದ ನಿಂದನೆ, ಪೊಲೀಸರಿಂದ ಹಲ್ಲೆ, ದೌರ್ಜನ್ಯ, ಅಕ್ರಮ ಬಂಧನ, ಪೊಲೀಸರಿಂದ ಅತ್ಯಾಚಾರ ಅಥವಾ ಅತ್ಯಾಚಾರ ಮಾಡಲು ಪ್ರಯತ್ನಿಸುವುದರ ವಿರುದ್ಧ ಸಾರ್ವಜನಿಕರು ನಿರ್ಭೀತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ದಲ್ಲಿದೂರು ಸಲ್ಲಿಸಬಹುದಾಗಿದೆ.

 

ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಅವರು ಪ್ರಕಟಣೆ ನೀಡಿದ್ದು, ದೂರುಗಳನ್ನು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ, 3ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಕಳಿಸುವ ಮೂಲಕ ಅಥವಾ ಕಚೇರಿಗೆ ಖುದ್ದಾಗಿ ಸಲ್ಲಿಸಬಹುದಾಗಿದೆ,

 

ಪ್ರಕರಣದ ಸ್ಥಿತಿಗತಿಗಳ ಬಗ್ಗೆ ತಿಳಿಯಲು ಕಚೇರಿಯ ದೂರವಾಣಿ ಸಂಖ್ಯೆ: 08022868302, 08022868303 ಗಳಿಗೆ ಕರೆ ಮಾಡಿ ತಿಳಿಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST