LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ

ಬಳ್ಳಾರಿ: ಜನರ ಕಲ್ಯಾಣಕ್ಕಾಗಿ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದು ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ನಗರದ ವಿವಿಧ ವಾರ್ಡುಗಳಲ್ಲಿ ಏರ್ಪಡಿಸಿದ್ದ ಭೂಮಿ ಪೂಜೆಗಳಲ್ಲಿ ಭಾಗವಹಿಸಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ ಅವರು, ನಗರ ಕ್ಷೇತ್ರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಯಾವುದೇ ಕಾಮಗಾರಿ ಅನಗತ್ಯ ವಿಳಂಬ ಆಗಬಾರದು, ಏನೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತನ್ನಿ, ಅಭಿವೃದ್ಧಿ ಕಾಮಗಾರಿ ಯಾವುದೇ ಕಾರಣಕ್ಕೂ ಜನರಿಗೆ ಸಮಸ್ಯೆ ಎನಿಸಬಾರದು ಎಂದರು.

 

ವಾರ್ಡ್ ಸಂಖ್ಯೆ 35 ರ ಸತ್ಯವಾಣಿ ನಗರದಲ್ಲಿ ಅಂದಾಜು 20 ಲಕ್ಷ ರೂ.ಗಳ ವೆಚ್ಚದಲ್ಲಿ ಅಂಗನವಾಡಿ  ಕೇಂದ್ರ 1ಕಾಮಗಾರಿಯ ಭೂಮಿ ಪೂಜೆ ನೆರವೇರಿಸಲಾಯಿತು. ಅದೇ ರೀತಿ ಕರಿಮಾರೆಮ್ಮ ಕಾಲೋನಿಯಲ್ಲಿ ಅಂದಾಜು 20 ಲಕ್ಷ ರೂ.ಗಳ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕ ನಾರಾ ಭರತ್ ರೆಡ್ಡಿ ಚಾಲನೆ ನೀಡಿದರು.



ವಾರ್ಡ್ ಸಂಖ್ಯೆ 36ರ ರಾಜೇಶ್ವರಿ ನಗರದಲ್ಲಿ ಅಂದಾಜು 40 ಲಕ್ಷ ರೂ.ಗಳ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ 1 ಮತ್ತು 2ರ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಅದೇ ರೀತಿ ಭತ್ರಿ ಗುಡ್ಡದ ಬಳಿ ಅಂದಾಜು ವೆಚ್ಚ 20 ಲಕ್ಷ ರೂ.ಗಳ ವೆಚ್ಚದ ಅಂಗನವಾಡಿ ಕೇಂದ್ರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಕೋಲಾಚಲಂ ಕಂಪೌಂಡ್ ರಸ್ತೆ ಹಾಗೂ ಬೀದಿ ದೀಪ ಅಳವಡಿಕೆಯ ಅಂದಾಜು ವೆಚ್ಚ 1 ಕೋಟಿ 2 ಲಕ್ಷ ರೂ.ಗಳ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

 

ಪಾಲಿಕೆಯ ಸದಸ್ಯರಾದ ಮಿಂಚು ಸೀನಾ, ಎಂ.ಪ್ರಭಂಜನಕುಮಾರ್, ವಿ.ಕುಬೇರಾ, ಕಾಂಗ್ರೆಸ್ ಮುಖಂಡರಾದ ಎಲ್ ಮಾರೆಣ್ಣ, ಎರಕುಲಸ್ವಾಮಿ, ಸಿದ್ಧೇಶ್, ಗುಡ್ಲೂರು ರವಿ, ಲಾರಿ ಮಾಲೀಕರ ಸಂಘದ ಶ್ರೀನಿವಾಸ್, ಸಂತೋಷ, ಸ್ಥಳೀಯ ಮುಖಂಡರಾದ ಬಾನು ಮತ್ತಿತರರು ಹಾಜರಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಲೋಕೇಶ್, ಭತ್ರಿ ವಾಸು,  ಡಾ.ಶ್ರೀಧರ್ ಗಡ್ಡಿ, ಡಾ.ರಾಜೇಶ್, ಥಿಯೇಟರ್ ಶಿವು ಸೇರಿದಂತೆ ಹಲವರು ಇದ್ದರು. 

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ