LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಲಂಚ ಮುಕ್ತ ಬಳ್ಳಾರಿಯನ್ನಾಗಿಸುವತ್ತ ಶಾಸಕರು ಗಮನ ಹರಿಸಿ

ಬಳ್ಳಾರಿ : ಬಳ್ಳಾರಿಯಲ್ಲಿ ಎಲ್ಲ ಕಛೇರಿಗಳಲ್ಲಿ ಲಂಚದವತಾರ ಸಾಮಾನ್ಯವಾಗಿದ್ದು, ಹಣ ವಿದ್ದರೆ ಮಾತ್ರ ಕೆಲಸ ಎನ್ನುವಂತಾಗಿದೆ. ನಿಷ್ಠಾವಂತ ಅಧಿಕಾರಿಗಳಿಂದ ಮಾತ್ರ ಇದಕ್ಕೆ ಕಡಿವಾಣ ಹಾಕಲು ಸಾಧ್ಯ, ಕೂಡಲೇ ಬಳ್ಳಾರಿಯಲ್ಲಿ ಕಳೆದ ಸುಮಾರು ವರ್ಷಗಳಿಂದ ಗಟ್ಟಿಯಾಗಿ ಕುಳಿತ ಅಧಿಕಾರಿಗಳನ್ನು ಕೂಡಲೇ ಎತ್ತಂಗಡಿ ಮಾಡಬೇಕು, ಲಂಚ ಮುಕ್ತ ಬಳ್ಳಾರಿಯನ್ನಾಗಿ ಮಾಡಿ ಬಡಜನರ ನೆಮ್ಮದಿ ಕಾಪಾಡಬೇಕು. ಸ್ಥಳೀಯ ಶಾಸಕರು ಈ ಕುರಿತು ಗಮನಹರಿಸಿ, ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಮನವಿ ಮಾಡಿದರು.

ಬಳ್ಳಾರಿ ನಗರದಲ್ಲಿ ಎಲ್ಲಂದರಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಇದರಿಂದ ಸುಗಮ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ವಾಹನ ಸವಾರರು ನಿತ್ಯ ಭಯದಲ್ಲೇ ಸಂಚರಿಸುವಂತಾಗಿದೆ. ಜೊತೆಗೆ ಧೂಳಿನ ಸಮಸ್ಯೆ ಸಾಮಾನ್ಯ ಎನ್ನುವಂತಾಗಿದ್ದು, ಸ್ವಚ್ಛತೆಗೆ ಪಾಲಿಕೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಈ ಕುರಿತು ಪೋಲೀಸ್ ಅಧಿಕಾರಿಗಳಿಗೆ, ಚುನಾಯಿತ ಜನಪ್ರತಿನಿಧಿಗಳು ಗಮನಕ್ಕೆ ಇದ್ದರು ಇದಕ್ಕೆ ನಮಗೆ ಯಾವುದೇ ಸಂಬಂಧವಿಲ್ಲ ಎಂದು ಕೈಕಟ್ಟಿ ಕುಳಿತಿದ್ದಾರೆ. ನಗರದ ರಾಯಲ್ ವೃತ್ತದಲ್ಲಿ ಜನರ ಪರದಾಟ, ವಾಹನ ಸವಾರರ ಪರದಾಟ ಹೇಳುವಂತಿಲ್ಲ, ನಿತ್ಯ ಸಾಕಷ್ಟು ರಸ್ತೆ ಅಪಘಾತಗಳು ಸಂಭವಿಸುತ್ತಿವೆ, ಇದಕ್ಕೆ ಕಡಿವಾಣ ಹಾಕುವಲ್ಲಿ ಪೋಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಈ ಕುರಿತು  ಗಮನಹರಿಸಿ ಸಮಸ್ಯೆ ಸರಿಪಡಿಸಲು ಮುಂದಾಗಬೇಕು ಎಂದರು.



ಬೆಳಿಗ್ಗೆ 8 ರಿಂದ ರಾತ್ರಿ 9ರ ವರೆಗೆ ನಗರದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧವಿದ್ದರೂ ಬಳ್ಳಾರಿ ನಗರದಲ್ಲಿ ವಾಹನಗಳ ಸಂಚಾರ ಸಾಮಾನ್ಯವಾಗಿದೆ. ಇದರಿಂದ ನಿತ್ಯ ಸವಾರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸಾಕಷ್ಟು ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ನಿಗಧಿತ ಭಾರಕ್ಕಿಂತ ಹೆಚ್ಚು ಭಾರ ಹೊತ್ತು ಭಾರಿ ವಾಹನಗಳ ಸಂಚಾರದಿಂದ ನಗರದ ರಸ್ತೆಗಳು ಸಂಪೂರ್ಣ ಹಾಳಾಗಿವೆ, ರಸ್ತೆ ಅಪಘಾತಗಳು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿವೆ.  ಇದಕ್ಕೆ ಕಡಿವಾಣ ಹಾಕುವಲ್ಲಿ ಆರ್.ಟಿ. ಒ ಅಧಿಕಾರಿಗಳು, ಪೋಲೀಸ್ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಹಿಂದೆ ಸುಮಾರು ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದರು. ಆದರೆ, ಇಲ್ಲಿವರೆಗೆ ಅವರ ವಿರುದ್ಧ ಕ್ರಮವಿಲ್ಲ. ವಿವಿಧ ಇಲಾಖೆ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ ದಾಳಿ ನಡೆಸಿದರೆ, ಸಂಜೆ ಮತ್ತೆ ಕರ್ತವ್ಯಕ್ಕೆ ಹಾಜರಾದ ಉದಾಹರಣೆಗಳಿದ್ದು, ಇದು ತಿಳಿಯದಾಗಿದೆ. ಲೋಕಾಯುಕ್ತ ದಾಳಿ ಅಂದ್ರೆ ಅಧಿಕಾರಿಗಳಿಗೆ ಭಯ ಹುಟ್ಟಿಸಬೇಕು, ಇತ್ತೀಚಿಗೆ ಅಧಿಕಾರಿಗಳಿಗೆ ಭಯವಿಲ್ಲದಂತಾಗಿದೆ. ಕೂಡಲೇ ಅಧಿಕಾರಿಗಳು ಕಚೇರಿಗಳಲ್ಲಿ ನಿತ್ಯ ನಡೆಯುತ್ತಿರುವ ಲಂಚದವತಾರಕ್ಕೆ ಕಡಿವಾಣ ಹಾಕಲು ಮುಂದಾಗಬೇಕು.  ಬಳ್ಳಾರಿ ಜಿಲ್ಲೆಯಲ್ಲಿ ಇಸ್ಪೀಟ್, ಜೂಟಾಟ, ಕ್ರಿಕೆಟ್ ಬೆಟ್ಟಿಂಗ್ ದಂಧೆ, ಗ್ಯಾಂಬಲಿಂಗ್ ಪ್ರಕರಣಗಳು ಹೆಚ್ಚಿದ್ದು, ಇದಕ್ಕೆ ಕಡಿವಾಣ ಹಾಕುವಲ್ಲಿ ಪೋಲೀಸ್ ಅಧಿಕಾರಿಗಳು, ಸ್ಥಳೀಯ ಆಡಳಿತ ಸಂಪೂರ್ಣ್ ವಿಫಲವಾಗಿದೆ. ಇದರಿಂದ ಅಮಾಯಕ ಬಡ ಕುಟುಂಬಗಳ ಜೀವನ ಮುರಾಬಟ್ಟೆಯಾಗಿದ್ದು, ಮಕ್ಕಳು ಸೇರಿ ಇಡೀ ಕುಟುಂಬಗಳು ನಿತ್ಯ ಕಣ್ಣೀರಲ್ಲಿ ಕೈತೊಳೆಯುತ್ತಿವೆ, ಕೂಡಲೇ ಪೊಲೀಸ್ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಕಡಿವಾಣ ಹಾಕಲು ಮುಂದಾಗಬೇಕು ಎಂದು ಮನವಿ ಮಾಡಿದರು.



ಈ ಸಂದರ್ಭದಲ್ಲಿ ರೈತ ವಿಭಾಗದ ಅಧ್ಯಕ್ಷರು ಲಕ್ಷ್ಮೀಕಾಂತ ರೆಡ್ಡಿ, ಮಹಿಳಾ ಘಟಕದ ಅಧ್ಯಕ್ಷರಾದ ಪುಷ್ಪಾ,ಜಮೀಲಾ ಬೇಗಂ, ಬಳ್ಳಾರಿ ನಗರ ಘಟಕದ ಅಧ್ಯಕ್ಷರಾದ ಹೊನ್ನೂರು ಸ್ವಾಮಿ (ವಂಡ್ರಿ), ಬಳ್ಳಾರಿ ಗ್ರಾಮಾಂತರ ಅಧ್ಯಕ್ಷರಾದ ಅಶೋಕ ಸಂಗನಕಲ್ಲು, ಸಿರುಗುಪ್ಪ ತಾಲ್ಲೂಕು ಅಧ್ಯಕ್ಷರಾದ ಶಿವ ನಾರಾಯಣ,ಕಂಪ್ಲಿ ತಾಲ್ಲೂಕು ಅಧ್ಯಕ್ಷರಾದ ಮೇಘರಾಜ್, ಶಬಾನಾ, ರೆಹಮತ್ ಮತ್ತು ಇತರ ಕಾಯ೯ಕತ೯ರು ಸೇರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ