LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕಲಿಕಾ ಗುಣಮಟ್ಟ ಸುಧಾರಿಸಲು ಕಲಿಕಾ ಹಬ್ಬ ಮುಖ್ಯ ವೇದಿಕೆ

ಸುರಪುರ : ಕಲಿಕಾ ಹಬ್ಬ ಎನ್ನುವುದು ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸಲು ಮತ್ತು ಕಲಿಕಾ ಸಾಮರ್ಥ್ಯ ಸುಧಾರಿಸಲು ಆಯೋಜಿಸಲಾದ ಒಂದು ಚಟುವಟಿಕೆ ಆಧಾರಿತ ಕಾರ್ಯಕ್ರಮವಾಗಿದೆ ಎಂದು ಕನ್ನೆಳ್ಳಿ ಕ್ಲಸ್ಟರ್ ನ ನಿಕಟಪೂರ್ವ ಸಂಪನ್ಮೂಲ ವ್ಯಕ್ತಿ ಪರಶುರಾಮ ಛಲವಾದಿ ಹೇಳಿದರು.

ಸುರಪುರ ತಾಲ್ಲೂಕಿನ ಕುರುಬನ ತಳ್ಳಳ್ಳಿ (ಕೆ. ತಳ್ಳಳ್ಳಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ

ಜಿಲ್ಲಾ ಪಂಚಾಯತಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯಾದಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸುರಪುರ ಸಮೂಹ ಸಂಪನ್ಮೂಲ ಕೇಂದ್ರ ಕನ್ನೆಳ್ಳಿ 2025 - 26 ನೇ ಸಾಲಿನ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ (FLN) ಆಧಾರಿತ ಕ್ಲಸ್ಟರ್ ಮಟ್ಟದ  ( FLN) ಕಲಿಕಾ ಹಬ್ಬದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1ನೇ ತರಗತಿಯಿಂದ 5ನೇ ತರಗತಿಯವರೆಗೆ ಎಫ್ ಎಲ್ ಏನ್ ಕಲಿಕೆಯ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗಿದ್ದು ಇದು ವಿಶೇಷವಾಗಿ ಕಲಿಕಾ ಅಂತರವನ್ನು ಕಡಿಮೆ ಮಾಡಲು ಮತ್ತು ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ ತಂಡದ ಕೆಲಸ ದಂತಹ ಜೀವನ ಕೌಶಲ್ಯಗಳನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

ಕನ್ನೆಳ್ಳಿ ಶಾಲೆಯ ಶಿಕ್ಷಕರಾದ ಮಂಜುನಾಥ ನಾಯಕ ರವರು ಮಾತನಾಡಿ ಈ ಹಬ್ಬದಲ್ಲಿ ಮಕ್ಕಳು ಆಟ ಹಾಡು ನಾಟಕ ಮತ್ತು ಇತರೆ ಚಟುವಟಿಕೆಗಳ ಮೂಲಕ ಸಂತೋಷದಿಂದ ಕಲಿಯುತ್ತಾರೆ. ಶಾಲೆಗಳ ಅಭಿವೃದ್ಧಿಯಲ್ಲಿ ಪೋಷಕರ ಸಮುದಾಯ ಹಾಗೂ ಶಿಕ್ಷಕರ ಬಾಗಿದಾರಿಕೆಯ ಅಗತ್ಯತೆಯ ಬಗ್ಗೆ ತಿಳಿಸಿದರು.

ಮೊದಲಿಗೆ ಗ್ರಾಮದ ಆಂಜನೇಯ ದೇವಸ್ಥಾನದಿಂದ  ಡೊಳ್ಳು ವಾದ್ಯ, ಶಾಲಾ ಮಕ್ಕಳಿಂದ ಕೋಲಾಟ, ಕುಂಭ ಕಳಶ ಮೇಳಗಳೊಂದಿಗೆ ಶಾಲೆಯವರೆಗೂ ಮೆರವಣಿಗೆ ಮಾಡಲಾಯಿತು. ನಂತರ ಸಸಿಗೆ ನೀರೆರೆಯುವ ಮೂಲಕ ವೇದಿಕೆ ಕಾರ್ಯಕ್ರಮದಕ್ಕೆ ಚಾಲನೆ ನೀಡಲಾಯಿತು.

ಕನ್ನೆಳ್ಳಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಹಣಮಂತ್ರಾಯ ಪಲ್ಲೇದ, ನಿಕಟಪೂರ್ವ ಸಂಪನ್ಮೂಲ ವ್ಯಕ್ತಿಗಳಾದ ಪರಶುರಾಮ ಛಲವಾದಿ, ಕನ್ನೆಳ್ಳಿ ಶಾಲೆಯ ಮುಖ್ಯ ಶಿಕ್ಷಕರಾದ ಮಂಜುನಾಥ ನಾಯಕ, ಕಚಕನೂರ ಶಾಲೆ ಮುಖ್ಯ ಶಿಕ್ಷಕರಾದ ಶಾಂತಗೌಡ ಶಿರಗುಂಡ, ಭೂದಾನಿಗಳಾದ ಸಾಹೇಬಗೌಡ ಪೊಲೀಸ್ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರಿ ಗಾಳಿ,ರಾಜಶೇಖರ ದೇಸಾಯಿ, ಮುಖ್ಯ ಶಿಕ್ಷಕರಾದ ಸತೀಶ ಶೆಟ್ಟಿ ಪಾಟೀಲ ವೇದಿಕೆಯಲ್ಲಿದ್ದರು.

ನಂತರ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

ಜಾಲಿಬೆಂಚಿ ಶಾಲೆಯ ಮುಖ್ಯ ಶಿಕ್ಷಕರಾದ ಕುಮಾರಗೌಡ, ಶ್ರೀಶೈಲ ಬಳಿಗಾರ, ವಾಹೀದ್ ಹುಸೇನ, ಟಿ.ಜಿ.ಬಾಬು, ಪಾಲಾಕ್ಷಿ ನಾಯ್ಕ, ಕೆ. ತಳ್ಳಳ್ಳಿ ಶಾಲೆಯ ಅತಿಥಿ ಶಿಕ್ಷಕರಾದ ಮಲ್ಲಿಕಾರ್ಜುನ ಜಾಲಿಬೆಂಚಿ, ನಾಗಪ್ಪ ಕೂಚಬಾಳ, ಬಸನಗೌಡ ಬಿರಾದಾರ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಅತಿಥಿ ಶಿಕ್ಷಕರು, ಮಕ್ಕಳು ಹಾಗೂ ಕೆ.ತಳ್ಳಳ್ಳಿ ಗ್ರಾಮದ ಹಿರಿಯರು, ಯುವಕರು,ಮುಖಂಡರು, ಹಳೆಯ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಉಪಸ್ಥಿತರಿದ್ದರು.

ಶಿಕ್ಷಕರಾದ ವೆಂಕಟೇಶ ಬ್ಯಾಕೋಡ್ ನಿರೂಪಿಸಿದರು ಮುಖ್ಯ ಶಿಕ್ಷಕರಾದ ಸತೀಶ ಶೆಟ್ಟಿ ಪಾಟೀಲ ವಂದಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ