ಚಿರತೆ ದಾಳಿ ನಡೆಸಿದ ಹಿನ್ನಲೆಯಲ್ಲಿ ತಲೆ, ಮೈ, ಕೈ, ಮುಖ ಸಂಪೂರ್ಣವಾಗಿ ರಕ್ತ ಗಾಯಗೊಂಡಿದ್ದು ಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗಿದೆ.
ಅರಣ್ಯ ಇಲಾಖೆ ವಿರುದ್ಧ ಸ್ಥಳೀಯ ಆಕ್ರೋಶ

ಹೊಳಲ್ಕೆರೆ ತಾಲ್ಲೂಕು ಗಿಲಿಕೇನಹಳ್ಳಿ ಸೇರಿ ಸುತ್ತಮುತ್ತಲ ಗ್ರಾಮದಲ್ಲಿ ಚಿರತೆಗಳ ಕಾಟ ಹೆಚ್ಚಾಗಿದೆ ಎಂದು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿ ಸತೀಶ್ ಇವರಿಗೆ ಸಾಕಷ್ಟು ಬಾರಿ ಮಾಹಿತಿ ನೀಡಿ ಚಿರತೆಗಳನ್ನು ನಿಯಂತ್ರಿಸುವಂತೆ ಹಾಗೂ ಜನ ಹಾಗೂ ಜಾನುವಾರುಗಳ ಮೇಲೆ ದಾಳಿ ನಡೆಸಿದಂತೆ ಎಚ್ಚರಿಕೆಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಸಾಕಷ್ಟು ಮಾಹಿತಿ ನೀಡಿದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಚಿರತೆಗಳ ಹಾವಳಿ ಹೆಚ್ಚಾಗಿದೆ. ಚಿರತೆ ಹಾಗೂ ಕರಡಿಗಳು ಜಿವಹಾನಿ ಮೊದಲೇ ನಿಯಂತ್ರಣ ಮಾಡಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ದಾಳಿ ತುತ್ತಾಗುವ ಮಹಿಳೆಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರ ಮದು ಅಗ್ರಹಿದ್ದಾರೆ.
ಹೊಳಲ್ಕೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಚೇತನ್ ರವರು ಹೊಳಲ್ಕೆರೆ ತಾಲೂಕ್ ಹಾಸ್ಪತ್ರೆಗೆ ಭೇಟಿ ನೀಡಿ ಚಿರತೆ ದಾಳಿಗೆ ಒಳಗದ ಗಿಲಕೇನಹಳ್ಳಿ ತನುಜ ಅವರನ್ನು ಭೇಟಿ ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳಿಸಿಕೊಡಲಾಯಿತು..