LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣಾ ಆಯುಕ್ತರನ್ನು ವಜಾಗೊಳಿಸುವಂತೆ ಗವರ್ನರ್ ಗೆ ಪತ್ರ.

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಒಂದು ರಾಜಕೀಯ ಪಕ್ಷದ ಕಂಡರಂತೆ ಮುಖಂಡರಂತೆ ಸಿಎಂ ಸಿದ್ದರಾಮಯ್ಯ ಪರ ಹೇಳಿಕೆ ನೀಡುವುದರಲ್ಲಿ ನಿರತರಾಗಿದ್ದಾರೆ ಹಾಗಾಗಿ ಅವರು ನಾಯಕ್ತರ ಸ್ಥಾನದಿಂದ ವಜೆಗೋಳಿಸಬೇಕೆಂದು ಕೋರಿ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ ರವಿಕುಮಾರ್ ಅವರು ಪತ್ರಿಕಾ ಹೇಳಿಕೆ ಮುಖಾಂತರ ತಿಳಿಸಿದ್ದಾರೆ.

 

ಪತ್ರಿಕೆ ಹೇಳಿಕೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಗೊಂಡ ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇರೆಗೆ ಜಿ ಎಸ್ ಸಂಗ್ರೇಶಿ ಆಯೋಗದ ಆಯುಕ್ತರಾಗಿದ್ದಾರೆ. ಆದರೆ ಇವರು 2023ರಲ್ಲಿ ಮೈಸೂರು ವಕೀಲರ ಸಂಘ ಆಯೋಜಿಸಿದ್ದ ಸಿದ್ದರಾಮಯ್ಯ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನು 1988ರಿಂದಲೂ ಸಿದ್ದರಾಮಯ್ಯ ಅವರನ್ನು ಅನುಸರಿಸಿಕೊಂಡು ಬಂದಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಸಿದ್ದರಾಮಯ್ಯ ಅವರು ಕೆಲವೊಂದು ಪ್ರಕರಣಗಳಲ್ಲಿ ಆರೋಪಿ ಎಂದು ತಿಳಿದಿದ್ದರೂ ತಾನು ಒಬ್ಬ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಸಹ ಈ ರೀತಿಯ ಹೇಳಿಕೆಗಳನ್ನು ಹಲವಾರು ಬಾರಿ ನೀಡಿದ್ದಾರೆ ಎಂದು ಆರೋಪಿಸಿದರು.



ಆಯುಕ್ತರು ರಾಜಕಾರಣಿಯಾ ಹಿಂಬಾಲಕರಂತೆ ಮಾತನಾಡುತ್ತಿದ್ದಾರೆ ಹೀಗಾಗಿ ಇವರು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾಗಿ ಮುಂದುವರೆಯುವುದಲ್ಲಿ ರಾಜ್ಯದಲ್ಲಿ ನ್ಯಾಯ ಸಮ್ಮತ ಮತ್ತು ಮುಕ್ತ ಚುನಾವಣೆ ಸಾಧ್ಯವಿಲ್ಲ ಹೀಗಾಗಿ ರಾಷ್ಟ್ರಪತಿಗಳ ಗಮನಕ್ಕೆ ತಂದು ಅವರನ್ನು ಹುದ್ದೆಯಿಂದ ವಜಗೊಳಿಸುವಂತೆ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ ಎಂದು ವಿವರಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST