LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ವಿಧಾನಸಭೆಯ ಚಳಿಗಾಲದ ಅಧಿವೇಶನದ ಕಾರ್ಯಕಲಾಪ ನೇರ ಪ್ರಸಾರ

ವಾರ್ತಾ ಇಲಾಖೆಯಿಂದ ಕ್ರಮ ವಹಿಸಲು ವಿಧಾನಸಭೆಯ ಸಭಾಧ್ಯಕ್ಷರ ಸೂಚನೆ

ಬೆಂಗಳೂರು : ಬೆಳಗಾವಿಯ ಸುವರ್ಣ ವಿಧಾನಸೌಧದ  ಸಭಾಂಗಣದಲ್ಲಿ ಡಿಸೆಂಬರ್ 8 ರಿಂದ 19 ರವರೆಗೆ ನಡೆಯಲಿರುವ 16ನೇ ವಿಧಾನಸಭೆಯ 8ನೇ ಅಧಿವೇಶನದ ಕಾರ್ಯಕಲಾಪಗಳನ್ನು ಚಿತ್ರೀಕರಿಸಿ, ನೇರ ಪ್ರಸಾರ ಮಾಡಲು ಹಾಗೂ ಚಿತ್ರೀಕರಿಸಿದ ದೃಶ್ಯಗಳನ್ನು (ಔಟ್‍ಪುಟ್) ಉಭಯ ಸದನಗಳ ಸಚಿವಾಲಯದ ಆಂತರಿಕ ದೂರದರ್ಶನ ಶಾಖೆ (ಸಿಸಿಟಿವಿ), ವೆಬ್‍ಕ್ಯಾಸ್ಟಿಂಗ್, ಯೂಟೂಬ್ ಮತ್ತು ಇತರೆ ಖಾಸಗಿ ಚಾನಲ್‍ಗಳಿಗೆ ಸಂಪರ್ಕ ಒದಗಿಸುವ ಕಾರ್ಯವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯವರಿಗೆ ವಹಿಸಲಾಗಿರುತ್ತದೆ.

 

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಚಿತ್ರೀಕರಿಸಿದ ವಿಧಾನಸಭೆಯ ಕಾರ್ಯಕಲಾಪಗಳ ಔಟ್‍ಪುಟ್ ಅನ್ನು ಇತರೆ ಖಾಸಗಿ ಸುದ್ದಿ ವಾಹಿನಿಯವರು https://youtube.com/@KarnatakaLASessions  ಲಿಂಕ್ ಮೂಲಕ ಪಡೆಯಬಹುದಾಗಿದೆ.



ಅಲ್ಲದೆ, ಮುದ್ರಣ ಮಾಧ್ಯಮದವರು ಸದನದ ಕಾರ್ಯಕಲಾಪಗಳ ಭಾವಚಿತ್ರಗಳನ್ನು ವಾರ್ತಾ ಇಲಾಖೆಯಿಂದ ಪಡೆಯಬಹುದಾಗಿದೆ.

 

ಸದನದ ಕಾರ್ಯಕಲಾಪಗಳನ್ನು ವರದಿ ಮಾಡುವ ವರದಿಗಾರರಿಗೆ ಮಾತ್ರ ವಿಧಾನಸಭೆಯ ಸಭಾಂಗಣದ ಪತ್ರಕರ್ತರ ಗ್ಯಾಲರಿಗೆ ಪ್ರವೇಶಿಸಲು ಅವಕಾಶವಿರುತ್ತದೆ

 

ಖಾಸಗಿ ಸುದ್ದಿ ವಾಹಿನಿಗಳ ಕ್ಯಾಮರಾಮನ್ ಹಾಗೂ ಮುದ್ರಣ ಮಾಧ್ಯಮದ ಛಾಯಾಗ್ರಾಹಕರುಗಳಿಗೆ ವಿಧಾನಸಭೆಯ ಸಭಾಂಗಣದೊಳಗೆ / ಪತ್ರಕರ್ತರ ಗ್ಯಾಲರಿಗೆ ಪ್ರವೇಶಾವಕಾಶ ಇರುವುದಿಲ್ಲ.

 

ವರದಿಗಾರರು ಸದನದ ಒಳಗೆ ಮೊಬೈಲ್ ದೂರವಾಣಿ, ಟ್ಯಾಬ್ ಇತ್ಯಾದಿಗಳನ್ನು ಕೊಂಡೊಯ್ಯುವಂತಿಲ್ಲ. ಎಲ್ಲಾ ಮುದ್ರಣ ಮಾಧ್ಯಮದವರು ಮತ್ತು ಸುದ್ದಿವಾಹಿನಿಯವರು ಸಹಕರಿಸಬೇಕೆಂದು ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ