LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸೆ ಅಗತ್ಯ: ಎಂ ಎ ಶಕೀಬ್

ಬಳ್ಳಾರಿ: ಜೀವಗಳನ್ನು ಉಳಿಸಲು, ಅನಾರೋಗ್ಯವನ್ನು ತಡೆಗಟ್ಟಲು ಹಾಗೂ ವೃತ್ತಿಪರ ವೈದ್ಯಕೀಯ ಸಹಾಯ ಉತ್ತೇಜಿಸಲು ಪ್ರಥಮ ಚಿಕಿತ್ಸೆ ನಿರ್ಣಾಯಕವಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ನ ಜಿಲ್ಲಾ ಶಾಖೆಯ ಎಂ.ಎ ಶಕೀಬ್ ಅವರು ಹೇಳಿದರು.

ವಿದ್ಯಾರ್ಥಿ ಕಲ್ಯಾಣ ಘಟಕ ಹಾಗೂ ವಿವಿಯ ಪ್ರಾಣಿಶಾಸ್ತç ಅಧ್ಯಯನ ವಿಭಾಗದ ಇವರ ಸಂಯುಕ್ತಾಶ್ರಯದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ “ಪ್ರಥಮ ಚಿಕಿತ್ಸಾ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು.



ಪ್ರಥಮ ಚಿಕಿತ್ಸೆಯು ಆರೋಗ್ಯ ಕಾಪಾಡುವಲ್ಲಿ ಬಹಳ ಪ್ರಮುಖವಾಗಿದೆ. ಆಕಸ್ಮಿಕವಾಗಿ ಕಾಯಿಲೆಗಳು ಅಥವಾ ಗಾಯಗಳಿಗೆ ತಕ್ಷಣದ ಸಹಾಯದ ಮಹತ್ವ ತಿಳಿಯಬೇಕು. ಇದರಿಂದ ತುರ್ತು ಪರಿಸ್ಥಿತಿಯನ್ನು ಹತೋಟಿಗೆ ತರಬಹುದು ಎಂದು ಹೇಳಿದರು. 

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಲಪತಿಗಳಾದ ಪ್ರೊ. ಎಂ ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ರಕ್ತ ನೀಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ನಿರ್ದಿಷ್ಟ ಪರಿಸ್ಥಿತಿಯನ್ನು ಆಧರಸಿ ಪ್ರಥಮ ಚಿಕಿತ್ಸೆಯನ್ನು ನೀಡಬೇಕು. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಲು ಪ್ರತಿಯೊಬ್ಬರು ಪ್ರಥಮ ಚಿಕಿತ್ಸೆಯ ಜ್ಞಾನ ಹೊಂದಿರಬೇಕು ಎಂದು ತಿಳಿಸಿದರು.

ವಿವಿಯ ಕುಲಸಚಿವರಾದ ನಾಗರಾಜು.ಸಿ ಮಾತನಾಡಿ, ವಿದ್ಯಾರ್ಥಿಗಳು ಪ್ರಥಮ ಚಿಕಿತ್ಸೆಯ ವಿವಿಧ ಆಯಾಮಗಳನ್ನು ಕಲಿತುಕೊಂಡು ಬೇರೆಯವರಿಗೂ ಕಲಿಸುವ ಕಾರ್ಯವನ್ನು ಮಾಡಬೇಕಾಗಿದೆ. ಪ್ರಥಮ ಚಿಕಿತ್ಸೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. 



ವಿದ್ಯಾರ್ಥಿ ಕಲ್ಯಾಣ ಘಟಕ ನಿರ್ದೇಶಕ ಡಾ.ಶಶಿಕಾಂತ ಎಚ್ ಮಜಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ