LIVE TV StateNationalPoliticsCrimeEntertainmentSportsEducationFINANCE & TAXATION
Districts Vijayanagara

ಕಾಡು–ವನ್ಯಜೀವಿ ಉಳಿದರೆ ಮಾತ್ರ ಮಾನವ ಸಂಕುಲ ಉಳಿವು:ಡಿ. ಒ.ಮುರಾರ್ಜಿ

ಕೂಡ್ಲಿಗಿ:  ಮಾನವರಂತೆ ವನ್ಯಜೀವಿಗಳಿಗೂ ಜೀವಿಸುವ ಹಕ್ಕು ಪರಿಸರ ಹಾಗೂ ಸಂವಿಧಾನ ನೀಡಿದ್ದು ವನ್ಯಜೀವಿಗಳ ಹತ್ಯೆ ಮತ್ತು ಅರಣ್ಯದಲ್ಲಿ ಕಳ್ಳಬೇಟೆ ಆಡುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಕರ್ನಾಟಕ ರಾಜ್ಯ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಒ. ಮುರಾರ್ಜಿ ತಿಳಿಸಿದರು.

 

ಶನಿವಾರ ಪಟ್ಟಣದ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಪ್ರಾದೇಶಿಕ ಅರಣ್ಯ ವಲಯ ಕೂಡ್ಲಿಗಿ ವತಿಯಿಂದ 72 ನೇ ವನ್ಯಜೀವಿ ಸಪ್ತಾಹ ಅಂಗವಾಗಿ ಬೀದಿನಾಟಕ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

 

ಕಾನೂನಿನ ಬಗ್ಗೆ ಅರಿವಿಲ್ಲದ ಕೆಲವರು ಅರಣ್ಯದಲ್ಲಿ ಕಳ್ಳಬೇಟೆ ಹಾಗೂ ಪ್ರಾಣಿಗಳ ಹತ್ಯೆ ಮಾಡುತ್ತಿರುವ ಕೆಲ ಪ್ರಕರಣಗಳು ಸಂರಕ್ಷಿತ ಅಭಯಾರಣ್ಯಗಳಲ್ಲಿ ಕಂಡು ಬರುತ್ತಿವೆ ಇಂತಹ ಪ್ರಕರಣಗಳ ಬಗ್ಗೆ ಸಮುದಾಯಕ್ಕೆ ಜಾಗೃತಿ ನೀಡಿ ಪರಿಸರ ಹಾಗೂ ವನ್ಯಜೀವಿಗಳ ಸಂತತಿ ಉಳಿಸುವುದು ಅರಣ್ಯ ಇಲಾಖೆಯ ಮುಖ್ಯ ಧ್ಯೇಯವಾಗಿದ್ದು ಪ್ರತಿಯೊಬ್ಬರು ಕಾನೂನಿಗೆ ಗೌರವ ನೀಡಿ ಅದನ್ನು ತಮ್ಮ ದೈನಂದಿನ ಬದುಕಲ್ಲಿ ಅಳವಡಿಸಿಕೊಳ್ಳಬೇಕೆಂದರು.

 news_1791088471_4_909.webp

 

ಪರಿಸರ ಮಾನವನ ಬದುಕಿಗೆ ಮುಖ್ಯ ಆಧಾರ ಗಿಡಮರಗಳಿಲ್ಲದೆ ನಾವುಗಳು ಬದುಕಲು ಸಾಧ್ಯವಿಲ್ಲ ಹೀಗಿದ್ದರೂ ನಾವುಗಳು ಪರಿಸರದ ಮೇಲೆ ದಾಳಿ ಮಾಡುತ್ತೇವೆ ಅರಣ್ಯ ಅತಿಕ್ರಮಣ ಮಾಡುವುದು ಗಿಡಮರಗಳ ಕಡಿಯುವುದು ಮಾಡಿದರೆ ಜೀವ ಸಂಕುಲ ಸಸ್ಯ ಸಂಕುಲ ನಾಶವಾಗುವುದಲ್ಲದೆ ಮಾನವನು ಸಹ ಕೊನೆಗೆ ನಾಶವಾಗುವೆನು ಎಂಬ ಸ್ವಯಂ ಜಾಗೃತದ ಅರಿವಿಟ್ಟುಕೊಂಡು ಅರಣ್ಯ ಇಲಾಖೆಯ ಕಾರ್ಯಗಳಿಗೆ ಕೈ ಜೋಡಿಸಿ ಪರಿಸರವನ್ನು ಮತ್ತು ವನ್ಯಜೀವಿಗಳನ್ನು ಕಾಪಾಡಬೇಕೆಂದು ತಿಳಿಸಿದರು.

 

ಈ ವೇಳೆ ಉಪ ವಲಯಾರಣ್ಯಾಧಿಕಾರಿ ಶಿವಕುಮಾರ್ ಬೀದಿನಾಟಕ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅರಣ್ಯ ರಕ್ಷಕರಾದ ಕಿರಣ್, ಕೊತ್ಲಪ್ಪ, ಕಲಾವಿದರಾದ ವಿಜಯಕುಮಾರ್, ಆಶಾ, ಮಂಜುನಾಥ್, ಶೀಲಾ ಮತ್ತಿತರರು ಉಪಸ್ಥಿತರಿದ್ದರು.

ಅಕ್ಷರ ಸಂಸ್ಥೆಯ ಕಲಾವಿದರು ಜಾಗೃತಿ ಕಾರ್ಯಕ್ರಮ ನಡೆಸಿಕೊಟ್ಟರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂತಹ ಪದಬಳಕೆಯನ್ನು ನಿರೀಕ್ಷಿಸಿರಲಿಲ್ಲ – ಬಿಜೆಪಿ ಮುಖಂಡ ಪ್ರಭಾಕರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿಆರ್.ವಿ.ಐ.ಎಂ ನಲ್ಲಿ 2024–26ನೇ ಸಾಲಿನ ಎಂಬಿಎ ಮತ್ತು ಪಿ ಜಿ ಡಿ ಬಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ;ಐಸಿಎಫ್ಎಐ ಕಾನೂನು ಶಾಲೆಯಲ್ಲಿ ಭಾರತದ ನಾಲ್ಕು ಕಾರ್ಮಿಕ ಸಂಹಿತೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆಏಷ್ಯನ್‌ ಗೇಮ್ಸ್‌ ಪದಕ ವಿಜೇತ ಕೆಐಐಟಿ, ಕಿಸ್‌ ಸಾಧಕರಿಗೆ ಸನ್ಮಾನಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ.  ಮೊಳಕಾಲ್ಮೂರಿಗೆ ಹೊಸ ನಾಯಕತ್ವದ ಅಗತ್ಯ ಕೊಪ್ಪಳ ; ಎಸ್.ಐ.ಆರ್ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿರೋಧ ‘ತಿರಂಗಾ ಯಾತ್ರೆ’ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ