ಪುರಸಭೆಯಾಗಿ ಮೇಲ್ದರ್ಜೆಗೇರಲು ಸಿದ್ದವಾದ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ
ಮರಿಯಮ್ಮನಹಳ್ಳಿ: ಮರಿಯಮ್ಮನಹಳ್ಳಿಯ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪೌರ ಆಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ವಿಜಯನಗರ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಆದೇಶಿಸಿದ್ದಾರೆ. ಹಗರಿಬೊಮ್ಮನಹಳ್ಳಿ ಶಾಸಕ ಕೆ .ನೇಮಿರಾಜ್ ನಾಯ್ಕ ಅವರ ಮನವಿ ಮೇರೆಗೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಹಗರಿಬೊಮ್ಮನಹಳ್ಳಿ ಪುರಸಭೆಯನ್ನು ನಗರ ಸಭೆಯಾಗಿ, ಕೊಟ್ಟೂರು ಮತ್ತು ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯನ್ನು ಪುರ ಸಭೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಪೌರ ಆಡಳಿತ ಸಚಿವರಿಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ರಹೀಮ್ ಖಾನ್ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೆರೆ ಅವರಿಗೆ ಸೂಚನ ಪತ್ರ ನೀಡಿದ್ದಾರೆ.
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.