ಆ. 16 ರಿಂದ ಸಾಮೂಹಿಕ ಇಷ್ಟಲಿಂಗ ಪೂಜೆ
ಮಸ್ಕಿ: ಶ್ರಾವಣ ನಿಮಿತ್ತ ತಾಲ್ಲೂಕು ಜಂಗಮ ಸಮಾಜ ಸಂಸ್ಥೆಯಿಂದ ಪಟ್ಟಣದ ಗಚ್ಚಿನಮಠದಲ್ಲಿ ಆ.16ರಿಂದ ಸಾಮೂಹಿಕ ಇಷ್ಟಲಿಂಗ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷ ಘನಮಠದಯ್ಯ ಸಾಲಿಮಠ ತಿಳಿಸಿದ್ದಾರೆ.
ಪಟ್ಟಣದ ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಿಗ್ಗೆ 6.30 ರಿಂದ ಎರಡು ದಿನ ಇಷ್ಟಲಿಂಗ ಪೂಜೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ತಾಲ್ಲೂಕಿನ ಜಂಗಮ ಸಮಾಜದ ಪ್ರತಿಭಾನಿತ್ವ ವಿದ್ಯಾರ್ಥಿಗಳಿಗೆ ಸತ್ಕಾರ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ. ಆಸಕ್ತರು 9482239358, 9480152419, 8310992521, 9482170187, 8073717720 ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಸಾಲಿಮಠ ಮನವಿ ಮಾಡಿದ್ದಾರೆ.
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.