LIVE TV StateNationalPoliticsCrimeEntertainmentSportsEducationFINANCE & TAXATION
Districts Chitradurga

ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿ

ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹೆಸರಿನಲ್ಲಿ ಹಣ ವಸೂಲಿ ಆರೋಪಗಳ ಬಗ್ಗೆ ಪರಿಶೀಲನೆ | ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡಲಾಗುತ್ತಿಲ್ಲ, ಬಡ ರೋಗಿಗಳಿಂದ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಯ ಹೆಸರಿನಲ್ಲಿ ಹಣ ಪಡೆಯುತ್ತಿದ್ದಾರೆ, ಆಸ್ಪತ್ರೆಯ ಸ್ವಚ್ಛತೆ, ಆಹಾರದ ಗುಣಮಟ್ಟ ಹಾಗೂ ವೈದ್ಯಕೀಯ ಸೇವೆಗಳಲ್ಲಿ ವಿಪರೀತ ಲೋಪಗಳಾಗಿವೆ ಎಂದು ಸಾಕಷ್ಟು ಸಮಸ್ಯೆಗಳು ಕೇಳಿ ಬಂದಿದ್ದವು ಈ ವಿಚಾರವನ್ನು ಗಮನಿಸಿದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸೋಮವಾರ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ವಿವಿಧ ವಾರ್ಡ್ಗಳಲ್ಲಿ ರೋಗಿಗಳೊಂದಿಗೆ ನೇರವಾಗಿ ಸಮಾಲೋಚನೆ ನಡೆಸಿ ಆಸ್ಪತ್ರೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು.

 ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿಗಳು ಸೇರಿದಂತೆ ಒಳರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಶಾಸಕರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಸರ್ಕಾರಿ ಆಸ್ಪತ್ರೆ ಎಂದರೆ ಬಡವರು, ಮಧ್ಯಮ ವರ್ಗದವರು ಹಾಗೂ ಆರ್ಥಿಕವಾಗಿ ಹಿಂದುಳಿದ ಜನರು ಚಿಕಿತ್ಸೆಗಾಗಿ ಅವಲಂಬಿಸುವ ಪ್ರಮುಖ ಕೇಂದ್ರವಾಗಿದೆ. ಇಂತಹ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಅಥವಾ ಹಣದ ಬೇಡಿಕೆಯ ಆರೋಪಗಳು ಕೇಳಿಬಂದರೆ ಅದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ಉಂಟುಮಾಡುತ್ತದೆ.

ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಮುಂದಾದ ಶಾಸಕರು, ಕೇವಲ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಕ್ಕೆ ಸೀಮಿತವಾಗದೆ ರೋಗಿಗಳ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿದರು.

ಜಿಲ್ಲಾ ಆಸ್ಪತ್ರೆಯ ವಿವಿಧ ರೋಗಿಗಳ ವಾರ್ಡ್ಗಳಿಗೆ ಭೇಟಿ ನೀಡಿದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆಯೇ ಎಂಬುದರ ಕುರಿತು ರೋಗಿಗಳನ್ನು ವಿಚಾರಿಸಿದರು. ವೈದ್ಯರು ಸಮಯಕ್ಕೆ ಸರಿಯಾಗಿ ಲಭ್ಯವಾಗುತ್ತಿದ್ದಾರೆಯೇ, ಅಗತ್ಯ ಔಷಧಿಗಳು ದೊರೆಯುತ್ತಿವೆಯೇ, ಚಿಕಿತ್ಸೆಯ ಸಂದರ್ಭದಲ್ಲಿ ಯಾವುದೇ ತೊಂದರೆ ಎದುರಾಗುತ್ತಿದೆಯೇ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.

ಚಿಕಿತ್ಸೆ ನೀಡಲು ಅಥವಾ ಶಸ್ತ್ರಚಿಕಿತ್ಸೆ ನಡೆಸಲು ಹಣ ಕೇಳಲಾಗುತ್ತಿದೆಯೇ ಎಂಬ ಪ್ರಶ್ನೆಯನ್ನೂ ರೋಗಿಗಳ ಮುಂದಿಟ್ಟರು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಅಥವಾ ನಿಯಮಾನುಸಾರ ದೊರೆಯಬೇಕಾದ ಸೇವೆಗಳಿಗೆ ಅನಧಿಕೃತವಾಗಿ ಹಣ ಪಡೆಯುವ ದೂರುಗಳು ನಿಜವೆಂದು ಸಾಬೀತಾದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು

 

ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಸೂಚಿಸಿದರು. ವೈದ್ಯಕೀಯ ಸೇವೆ ಎನ್ನುವುದು ಮಾನವೀಯತೆ ಮತ್ತು ಸೇವಾ ಮನೋಭಾವಕ್ಕೆ ಸಂಬAಧಿಸಿದ ಮಹತ್ವದ ಕರ್ತವ್ಯವಾಗಿದ್ದು, ವಿಶೇಷವಾಗಿ ಬಡವರು ಮತ್ತು ಅಸಹಾಯಕ ರೋಗಿಗಳಿಗೆ ಯಾವುದೇ ತಾರತಮ್ಯವಿಲ್ಲದೆ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

ಆಸ್ಪತ್ರೆಗೆ ಬರುವ ರೋಗಿಗಳು ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಅವರನ್ನು ಅನಗತ್ಯವಾಗಿ ಅಲೆದಾಡಿಸುವುದು, ಚಿಕಿತ್ಸೆ ವಿಳಂಬ ಮಾಡುವುದು ಅಥವಾ ಅವರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ತೋರುವುದು ಸರಿಯಾದ ಕ್ರಮವಲ್ಲ. ಪ್ರತಿಯೊಬ್ಬ ರೋಗಿಗೂ ಗೌರವಯುತವಾಗಿ ಸ್ಪಂದಿಸಿ, ಅಗತ್ಯ ವೈದ್ಯಕೀಯ ಸೇವೆಗಳನ್ನು ಸಕಾಲದಲ್ಲಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆಸ್ಪತ್ರೆಯ ಆಡಳಿತದಲ್ಲಿ ಯಾವುದೇ ಲೋಪದೋಷಗಳಿದ್ದರೆ ಅವುಗಳನ್ನು ಸರಿಪಡಿಸಬೇಕು. ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಬಳಿಕ ಮಾತ್ರ ಎಚ್ಚೆತ್ತುಕೊಳ್ಳುವ ಬದಲು, ಪ್ರತಿದಿನವೂ ಸೇವೆಗಳ ಗುಣಮಟ್ಟದಿಂದ ನಿರ್ವಹಿಸಿ ಎಂದು ಆಸ್ಪತ್ರೆಯ ಸಿಬ್ಬಂದಿಗಳಿಗೆ ತಿಳಿಸಿದರು.

ಅಡುಗೆ ಕೋಣೆಗೆ ಭೇಟಿ: ಆಹಾರದ ಗುಣಮಟ್ಟದ ಬಗ್ಗೆ ಕಾಳಜಿ

ಜಿಲ್ಲಾ ಆಸ್ಪತ್ರೆಯ ಒಳರೋಗಿಗಳಿಗೆ ಉಚಿತವಾಗಿ ಆಹಾರ ಸಿದ್ಧಪಡಿಸಿ ವಿತರಿಸುವ ಅಡುಗೆ ಕೋಣೆಗೂ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೇಟಿ ನೀಡಿ ಪರಿಶೀಲಿಸಿದರು. ಆಹಾರ ಪದಾರ್ಥಗಳನ್ನು ಸಂಗ್ರಹಿಸುವ ಕೊಠಡಿಗಳು, ಅಡುಗೆಗೆ ಬಳಸುವ ಸಾಮಗ್ರಿಗಳು ಹಾಗೂ ಅಡುಗೆ ಕೋಣೆಯ ಸ್ವಚ್ಛತೆಯ ಬಗ್ಗೆ ಗಮನ ಹರಿಸಿದರು.

ರೋಗಿಗಳಿಗೆ ನೀಡುವ ಆಹಾರದಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಡಿಮೆ ಬೆಲೆಯ ಪದಾರ್ಥಗಳನ್ನು ಖರೀದಿಸುವುದಕ್ಕೆ ಮಾತ್ರ ಗಮನ ಹರಿಸದೆ, ಗುಣಮಟ್ಟದ ತರಕಾರಿಗಳನ್ನು ಖರೀದಿಸಿ ಪೌಷ್ಟಿಕಾಂಶಯುಕ್ತ ಆಹಾರ ತಯಾರಿಸಬೇಕು. ತರಕಾರಿ ಮತ್ತು ಸೊಪ್ಪುಗಳನ್ನು ಸೂಕ್ತ ಪ್ರಮಾಣದಲ್ಲಿ ಬಳಸಿಕೊಂಡು ರುಚಿಕರವಾದ ಹಾಗೂ ಆರೋಗ್ಯಕರ ಆಹಾರವನ್ನು ರೋಗಿಗಳಿಗೆ ನೀಡಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.

ಪ್ರತಿದಿನ ಸುಮಾರು 600ರಿಂದ 800 ಜನರಿಗೆ ಊಟ ವಿತರಿಸಲಾಗುತ್ತದೆ ಎಂಬ ಹಿನ್ನೆಲೆಯಲ್ಲಿ, ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗಬಾರದು ಎಂದು ಸೂಚಿಸಿದರು. ಅಡುಗೆ ಕೋಣೆ ಸದಾ ಸ್ವಚ್ಛವಾಗಿರಬೇಕು. ಆಹಾರ ಪದಾರ್ಥಗಳ ಗುಣಮಟ್ಟ, ಸಂಗ್ರಹಣೆ ಮತ್ತು ವಿತರಣೆಯ ಮೇಲೂ ನಿಗಾ ವಹಿಸಬೇಕು ಎಂದು ತಿಳಿಸಿದರು.

ರೋಗಿಗಳಿಗೆ ನೀಡುವ ಆಹಾರ ಕೇವಲ ಹೊಟ್ಟೆ ತುಂಬಿಸುವ ಉದ್ದೇಶಕ್ಕೆ ಸೀಮಿತವಾಗಬಾರದು. ಅವರ ಆರೋಗ್ಯ ಚೇತರಿಕೆಗೆ ಸಹಕಾರಿಯಾಗುವಂತೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸುವುದು ಆಸ್ಪತ್ರೆಯ ಪ್ರಮುಖ ಜವಾಬ್ದಾರಿಯಾಗಿದೆ. ಈ ವಿಚಾರದಲ್ಲಿ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂಬ ಸೂಚನೆಯನ್ನು ಶಾಸಕರು ನೀಡಿದರು.

 news_1793036155_7_453.webp

 

ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹಣ ವಸೂಲಿ ಆರೋಪದ ಪರಿಶೀಲನೆ:-

ಹೆರಿಗೆ ಮಾಡಿಸಲು 8 ರಿಂದ 10 ಸಾವಿರ ರೂಪಾಯಿವರೆಗೆ ಹಣ ಪಡೆಯಲಾಗುತ್ತಿದೆ ಎಂಬ ಮಾಹಿತಿ ಕೇಳಿಬಂದ ಹಿನ್ನೆಲೆಯಲ್ಲಿ, ಶಾಸಕರು ವಾರ್ಡ್ಗಳಿಗೆ ತೆರಳಿ ಅಲ್ಲಿದ್ದ ಮಹಿಳೆಯರು ಮತ್ತು ಅವರ ಕುಟುಂಬದವರೊAದಿಗೆ ಸಮಾಲೋಚನೆ ನಡೆಸಿದರು. ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾದಾಗ ಯಾವುದೇ ಹಣದ ಬೇಡಿಕೆ ಎದುರಾಯಿತೇ, ವೈದ್ಯರು ಮತ್ತು ಸಿಬ್ಬಂದಿ ಸರಿಯಾಗಿ ಸ್ಪಂದಿಸುತ್ತಿದ್ದಾರೆಯೇ ಎಂಬ ಕುರಿತು ಮಾಹಿತಿ ಪಡೆಯಲು ಮುಂದಾದರು.

ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಸಂಬAಧಿಸಿದ ಸೇವೆಗಳಿಗಾಗಿ ಅನಧಿಕೃತವಾಗಿ ಹಣ ಪಡೆಯಲಾಗುತ್ತಿದೆ ಎಂಬ ಆರೋಪಗಳು ನಿಜವೆಂದು ದೃಢಪಟ್ಟರೆ, ಅದು ಗಂಭೀರ ವಿಚಾರವಾಗಲಿದೆ. ವಿಶೇಷವಾಗಿ ಬಡ ಕುಟುಂಬಗಳು ಹೆರಿಗೆ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸರ್ಕಾರಿ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುವುದರ ಜೊತೆಗೆ, ಅರ್ಹರಿಗೆ ನಿಯಮಾನುಸಾರ ಸೇವೆಗಳು ದೊರೆಯುವಂತೆ ನೋಡಿಕೊಳ್ಳಬೇಕು.

ಹೆರಿಗೆ ವಾರ್ಡ್ಗಳಲ್ಲಿ ಮಹಿಳೆಯರಿಗೆ ಅಗತ್ಯ ಆರೈಕೆ, ವೈದ್ಯಕೀಯ ನೆರವು ಮತ್ತು ಗೌರವಯುತ ಸೇವೆ ದೊರೆಯಬೇಕು. ಹಣದ ವಿಚಾರದಲ್ಲಿ ಯಾವುದೇ ಗೊಂದಲ ಅಥವಾ ದೂರುಗಳಿದ್ದರೆ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುವ ಅಗತ್ಯವಿದೆ.

ಡೀನ್ ಮತ್ತು ಆರ್‌ಎಂಒ ನಡುವಿನ ಭಿನ್ನಾಭಿಪ್ರಾಯ ಮತ್ತೆ ಮುನ್ನೆಲೆಗೆ

ಜಿಲ್ಲಾಸ್ಪತ್ರೆಯ ವೈದ್ಯಕೀಯ ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ನಡುವಿನ ಭಿನ್ನಾಭಿಪ್ರಾಯದ ವಿಚಾರವೂ ಶಾಸಕರ ಭೇಟಿಯ ಸಂದರ್ಭದಲ್ಲಿ ಚರ್ಚೆಗೆ ಬಂದಿತು. ನಿವಾಸಿ ವೈದ್ಯಾಧಿಕಾರಿ (ಆರ್‌ಎಂಒ) ಡಾ. ಪಾರ್ವತಿ ಅವರು ಆಸ್ಪತ್ರೆಯ ಆಡಳಿತಾತ್ಮಕ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ಡೀನ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗಿನ ಸಮನ್ವಯದ ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆದರು.

ಕಳೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿಯೂ ಆಸ್ಪತ್ರೆಯ ವೈದ್ಯಕೀಯ ಆಡಳಿತ ಮತ್ತು ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾಗಿ ಡಾ. ಪಾರ್ವತಿ ತಿಳಿಸಿದ್ದಾರೆ. ಆರ್‌ಎಂಒ ಹುದ್ದೆಯ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಲು ಡೀನ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಿಂದ ಅಗತ್ಯ ಸಹಕಾರ ದೊರೆಯುತ್ತಿಲ್ಲ ಎಂಬುದು ಅವರ ಆರೋಪವಾಗಿದೆ.

ಬಡ ರೋಗಿಗಳಿಗೆ ಉಚಿತವಾಗಿ ಮತ್ತು ಪ್ರಾಮಾಣಿಕವಾಗಿ ಆರೋಗ್ಯ ಸೇವೆ ಒದಗಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಅಧಿಕಾರಿಗಳ ವರ್ತನೆ ಹಾಗೂ ಆಡಳಿತಾತ್ಮಕ ಅಡೆತಡೆಗಳಿಂದ ಕರ್ತವ್ಯ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಡಾ. ಪಾರ್ವತಿ ಅವರು ಶಾಸಕರ ಮುಂದೆ ತಮ್ಮ ಅಳಲನ್ನು ತೋಡಿಕೊಂಡರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಮೆಡಿಕಲ್ ಕಾಲೇಜು ವ್ಯವಸ್ಥಾಪಕ ಯುವರಾಜ್, ಜಿಲ್ಲಾಸ್ಪತ್ರೆ ಡಿ ಎಸ್ ರವೀಂದ್ರ, ಡಾ.ಪಾರ್ವತಿ, ನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಂಜಿನಪ್ಪ ಹಾಗೂ ಇತರರು ಇದ್ದರು.

 

ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ನಡುವೆ ಸಮನ್ವಯ ಇರಬೇಕು. ಆಂತರಿಕ ಭಿನ್ನಾಭಿಪ್ರಾಯಗಳು ರೋಗಿಗಳ ಚಿಕಿತ್ಸೆಯ ಮೇಲೆ ಪರಿಣಾಮ ಬೀರಬಾರದು. ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಿಗೆ ನಂಬಿಕೆಯಿAದ ಬರುತ್ತಾರೆ. ಅವರ ನಂಬಿಕೆಗೆ ಧಕ್ಕೆಯಾಗದಂತೆ ವೈದ್ಯರು ಮತ್ತು ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂಬುದು ಸಾರ್ವಜನಿಕರ ನಿರೀಕ್ಷೆಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು.

ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂತಹ ಪದಬಳಕೆಯನ್ನು ನಿರೀಕ್ಷಿಸಿರಲಿಲ್ಲ – ಬಿಜೆಪಿ ಮುಖಂಡ ಪ್ರಭಾಕರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿಆರ್.ವಿ.ಐ.ಎಂ ನಲ್ಲಿ 2024–26ನೇ ಸಾಲಿನ ಎಂಬಿಎ ಮತ್ತು ಪಿ ಜಿ ಡಿ ಬಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ;ಐಸಿಎಫ್ಎಐ ಕಾನೂನು ಶಾಲೆಯಲ್ಲಿ ಭಾರತದ ನಾಲ್ಕು ಕಾರ್ಮಿಕ ಸಂಹಿತೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆಏಷ್ಯನ್‌ ಗೇಮ್ಸ್‌ ಪದಕ ವಿಜೇತ ಕೆಐಐಟಿ, ಕಿಸ್‌ ಸಾಧಕರಿಗೆ ಸನ್ಮಾನಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ.  ಮೊಳಕಾಲ್ಮೂರಿಗೆ ಹೊಸ ನಾಯಕತ್ವದ ಅಗತ್ಯ ಕೊಪ್ಪಳ ; ಎಸ್.ಐ.ಆರ್ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿರೋಧ ‘ತಿರಂಗಾ ಯಾತ್ರೆ’ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ