LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕೊಟ್ಟ ಮಾತಿನಂತೆ ನಡೆದಿದ್ದೇನೆ: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

 

ಬಳ್ಳಾರಿಯ ಬಸವೇಶ್ವರ ನಗರದಲ್ಲಿ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

 

ಮೂರು ಹಂತಗಳಲ್ಲಿ ಒಟ್ಟು 84 ಕೋಟಿ ರೂ.ಗಳ ಅನುದಾನ ತರಲಾಗಿದ್ದು, ಇವುಗಳ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ, ಬೆಳಗಾವಿ ಅಧಿವೇಶನದ ನಂತರ ಮತ್ತೆ 3 ಕೋಟಿ ರೂ.ಗಳ ಅನುದಾನದ ಅಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು, ಕೊಟ್ಟ ಮಾತಿನಂತೆ ಬಳ್ಳಾರಿಯನ್ನು ಸುವರ್ಣ ಬಳ್ಳಾರಿಯಾಗಿ ರೂಪಿಸುತ್ತಿದ್ದೇವೆ ಎಂದರು.



ನಗರದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳಿಂದಾಗಿ ಜನರಿಗೆ ಸದ್ಯಕ್ಕೆ ಅನಾನುಕೂಲ ಆಗುತ್ತಿರುವುದು ನಿಜ, ಇನ್ನೂ ಆರು ತಿಂಗಳು ಜನರು ಕಷ್ಟವನ್ನು ಸಹಿಸಿಕೊಳ್ಳಬೇಕು, ಏಕೆಂದರೆ ಈಗ ಸಾಕಷ್ಟು ಕಾಮಗಾರಿಗಳು ಮತ್ತೆ ಆರಂಭ ಆಗಲಿವೆ ಎಂದರು.

 

ಜ.3ರಂದು ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯ ಅನಾವರಣ ಆಗಲಿದೆ, ಅದ್ಧೂರಿಯಾಗಿ ಕಾರ್ಯಕ್ರಮ ನಡೆಯಲಿದೆ, ಸಾವಿರಾರು ಜನ ಭಾಗಿಯಾಗಲಿದ್ದಾರೆ, ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಕೆ.ಎನ್.ರಾಜಣ್ಣ, ಸಚಿವ ಜಮೀರ್ ಅಹ್ಮದ್, ಸಂಸದ ತುಕಾರಾಂ, ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ರಾಜ್ಯದ ಜಿಲ್ಲೆಯ ಎಸ್ಟಿ ಸಮುದಾಯದ ಶಾಸಕರು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

 

ಇದಕ್ಕೂ ಮುನ್ನ 23ನೇ ವಾರ್ಡಿನ ಮಹಾನಂದಿಕೊಟ್ಟಂನಲ್ಲಿ ಮಹಾತ್ಮ ಗಾಂಧಿ ನಗರ ಯೋಜನೆ ಅಡಿ 2.50 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಮೂಲಕ ಚಾಲನೆ ನೀಡಿದರು.



21ನೇ ವಾರ್ಡಿನ ಬಸವೇಶ್ವರ ನಗರದಲ್ಲಿ ಅಂದಾಜು 4 ಕೋಟಿ ರೂ.ಗಳ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

 

ತದನಂತರ 15ನೇ ವಾರ್ಡಿನ ವಡ್ಡರ ಬಂಡೆಯ ಬಳಿ ಅಂದಾಜು ವೆಚ್ಚ 2 ಕೋಟಿ ರೂ.ಗಳಲ್ಲಿ, ಅದೇ ರೀತಿ ವಾರ್ಡ್ ಸಂಖ್ಯೆ 16ರ ಶ್ರೀರಾಂಪುರ ಕಾಲೋನಿಯಲ್ಲಿ 2.80 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಶಾಸಕ ನಾರಾ ಭರತ್ ರೆಡ್ಡಿ ಚಾಲನೆ ನೀಡಿದರು.



ಈ ಸಂದರ್ಭ ಮೇಯರ್ ಪಿ.ಗಾದೆಪ್ಪ, ಉಪ ಮೇಯರ್ ಮುಬೀನಾಬೀ, ಪಾಲಿಕೆಯ ಆಯುಕ್ತ ಪಿ.ಮಂಜುನಾಥ, ಮಾಜಿ ಮೇಯರ್ ರಾಜೇಶ್ವರಿ, ಸದಸ್ಯರಾದ ಸುರೇಖಾ ಗೌಡ, ನೂರ್ ಮೊಹಮ್ಮದ್, ಟಿ.ವಿ.ಪ್ರಸಾದ್, ಕಾಂಗ್ರೆಸ್ ವಕ್ತಾರ ವೆಂಕಟೇಶ ಹೆಗಡೆ, ಸೋಮಶೇಖರ್, ಚಾನಾಳ್ ಶೇಖರ್, ಗೋನಾಳ ನಾಗಭೂಷಣ, ಯಾಳ್ಪಿ ಪಂಪನಗೌಡ, ಬಿಸಿಲಹಳ್ಳಿ ಮಂಜು, ಮಂಜು ಬೆಳ್ಳಿಗಾರ, ಶಂಕರ್, ಹಿರೇಮಠ, ಗೌತಮ್, ಖಾದರ್, ಬಿಆರೆಲ್ ಸೀನಾ, ಬಾಲರಾಜು, ಚರಣ್, ಅಭಿ ಸೇರಿದಂತೆ ಹಲವರು ಹಾಜರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ