LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ನೂತನ ಮಾರುಕಟ್ಟೆ ಉದ್ಘಾಟಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ಬೀದಿ ಬದಿ ವ್ಯಾಪಾರಿಗಳ ಬೇಡಿಕೆ ಆಧರಿಸಿ, ಅವರ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನೂತನ ತರಕಾರಿ ಹಾಗೂ ಹೂವು ಮಾರುಕಟ್ಟೆಯನ್ನು ನಿರ್ಮಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು.

 

ಶನಿವಾರ ಬಳ್ಳಾರಿಯ 1ನೇ ವಾರ್ಡ್ ವ್ಯಾಪ್ತಿಯ ಪಾರ್ವತಿ ನಗರದ (ಕೇಂದ್ರ ಕಾರಾಗೃಹದ ಬಳಿ) ಶಾಸಕರ ಅನುದಾನದಲ್ಲಿ ಅಂದಾಜು 29.33 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಆಗಿರುವ ನೂತನ ಮಾರುಕಟ್ಟೆ ಪ್ರಾಂಗಣವನ್ನು ಉದ್ಘಾಟಿಸಿದರು.

 

ಬೀದಿ ಬದಿ ಇದ್ದ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆ ಗಮನಿಸಿ, ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಮಾರುಕಟ್ಟೆಯ ನಿರ್ಮಾಣ ಮಾಡಲಾಗಿದೆ, ಇದರ ಸದ್ಬಳಕೆ ಆಗಬೇಕು, ಈ ಮೊದಲು ಇಲ್ಲಿದ್ದ ವ್ಯಾಪಾರಿಗಳೇ ಮಳಿಗೆಗಳನ್ನು ಪಡೆದು ವ್ಯಾಪಾರ ಮಾಡಬೇಕು ಎಂದರು.



ಈ ಸಂದರ್ಭ ಮೇಯರ್ ಪಿ.ಗಾದೆಪ್ಪ, ವಾರ್ಡಿನ ಪಾಲಿಕೆಯ ಸದಸ್ಯ ಗುಡಿಗಂಟಿ ಹನಮಂತು, ಮಾಜಿ ಮೇಯರ್ ಎಂ.ರಾಜೇಶ್ವರಿ, ಸದಸ್ಯ ಪೇರಂ ವಿವೇಕ್, ಪಾಲಿಕೆಯ ಆಯುಕ್ತ ಮಂಜುನಾಥ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಮಹಮ್ಮದ್ ಭಾಯ್, ಪರಶುರಾಮುಡು, ಹಗರಿ ಗೋವಿಂದ, ಪದ್ಮಾ, ಥಿಯೇಟರ್ ಶಿವು ಮತ್ತಿತರರು ಹಾಜರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ