LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಮೋದಿ ಜೀ ಯವರ ಪಾತ್ರ ಅಪಾರವಾಗಿದೆ : ಡಾ. ಬಸವರಾಜ ಕ್ಯಾವಟರ

ಕೊಪ್ಪಳ : ಕೊಪ್ಪಳ ನಗರದ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ  ವಿಕಸಿತ ಭಾರತ ಅಮೃತ್ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರಕಾರಕ್ಕೆ 11 ವರ್ಷ ಪುರೈಸಿದಕ್ಕೆ ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬಿಜೆಪಿ ಮುಖಂಡ ಬಸವರಾಜ ಕ್ಯಾವಟರ್ ತಿಳಿಸಿದರು.

 ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಸಾಮಾಜಿಕವಾಗಿ, ವೈಜ್ಞಾನಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಧೃಡವಾದ ಭಾರತವನ್ನು ನಿರ್ಮಾಣ ಮಾಡುವಲ್ಲಿ ನರೇಂದ್ರ ಮೋದಿಯವರ ಕೊಡುಗೆ ಅಪಾರವಾಗಿದೆ. ಹೀಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ, ಸಾಂಸ್ಕೃತಿಕ ವೈವಿಧ್ಯತೆಯನ್ನು, ರಾಷ್ಟ್ರೀಯ ಸಮಗ್ರತೆ, ಏಕತೆ ಹಾಗೂ ಭ್ರಾತೃತ್ವದ ಸಲುವಾಗಿ ನನ್ನ ಜಾತಿ,   ಧರ್ಮ, ಭಾಷೆ, ಲಿಂಗ , ಮತ್ತು ಪ್ರಾದೇಶಿಕತೆಯನ್ನು ಮತ್ತು ಸಾರ್ವಜನಿಕ ಸ್ವತ್ತುಗಳನ್ನು ರಕ್ಷಿಸುವಲ್ಲಿ, ಸ್ವಾಸ್ಥ್ಯ ಭಾರತವನ್ನು ನಿರ್ಮಿಸುವಲ್ಲಿ, ನರೇಂದ್ರ ಮೋದಿಯವರ ಸಾಧನೆ ಅಗಾಧವಾಗಿದೆ ಎಂದರು.



ಕೊನೆಯದಾಗಿ ಮೋದಿಜಿಯವರು ಒಂದು ಮಾತನ್ನು ಹೇಳುತ್ತಾರೆ ವಿಕಸಿತ ಭಾರತ - 2047 ಕನಸನ್ನು ನನಸಾಗಿಸಲು ನಾನು ಶಾರೀರಿಕವಾಗಿ, ಮಾನಸಿಕವಾಗಿ, ನನ್ನ ದೇಹ, ಮನಸ್ಸು, ಸಂಪತ್ತು ಮತ್ತು ಕಾರ್ಯಗಳಿಂದ ಹೃದಯಪೂರ್ವಕವಾಗಿ ತೊಡಗಿಸಿಕೊಳ್ಳುತ್ತೇನೆ ಮತ್ತು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುವುದಕ್ಕೆ  ಪ್ರತಿಜ್ಞೆ ಮಾಡುತ್ತೇನೆ ಎಂದಿದ್ದಾರೆ. ಹಾಗಾಗಿ ಇಂದು ಈಗ ಮತ್ತು ಮುಂದಿನ ಭವಿಷ್ಯಕ್ಕಾಗಿ ನರೇಂದ್ರ ಮೋದಿಯವರನ್ನು ಬೆಂಬಲಿಸೋಣ  ಎಂದು ಕರೆ ನೀಡಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST