LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಮುಷ್ಟೂರು: ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯ

ಕ್ರೈ ಸಂಸ್ಥೆ–ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜನೆ

ಅರಕೇರಾ : ತಾಲೂಕಿನ ಮುಷ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಂಜನಯ್ಯ ದೇವಸ್ಥಾನ ಆವರಣದಲ್ಲಿ ಗುರುವಾರ ಕ್ರೈ ಸಂಸ್ಥೆ ಬೆಂಗಳೂರು ಹಾಗೂ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ರೈ ಸಂಸ್ಥೆ ಸಮಾಲೋಚಕ ರಾಮಣ್ಣ ಎನ್ ಗಣೇಕಲ್,  “ಇತ್ತೀಚಿನ ಮಳೆಯಿಂದ ಓಣಿ, ಕೇರಿಗಳ ನೀರು ಗ್ರಾಮಗಳೊಳಗೆ ನುಗ್ಗಿ ತೊಂದರೆ ಉಂಟು ಮಾಡಿದೆ. ಪ್ರತಿಯೊಬ್ಬರೂ ತಮ್ಮ ಮನೆ ಸುತ್ತಮುತ್ತಲನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರೋಗ ಹರಡುವಿಕೆ ತಡೆಯಬೇಕು” ಎಂದು ಜನತೆಗೆ ಕರೆ ನೀಡಿದರು.

 

ಹೆಲ್ತ್ ಇನ್ಸ್ಪೆಕ್ಟರ್ ಪ್ರವೀಣ್ ನಾಯಕ ಅವರು ಮಾತನಾಡಿ, “ಕಸವನ್ನು ಅಸಮರ್ಪಕವಾಗಿ ಹಾಕುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಇದರಿಂದ ಮಹಿಳೆಯರು, ಮಕ್ಕಳು ಹಾಗೂ ವೃದ್ಧರ ಆರೋಗ್ಯ ಹದಗೆಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಶಿಸ್ತಿನಿಂದ ಕಸ ವಿಲೇವಾರಿ ಮಾಡಬೇಕು” ಎಂದು ತಿಳಿಸಿದರು.

 

ಈ ಸಂದರ್ಭದಲ್ಲಿ ಡಾ. ಸೋಮಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಂಜಯ, ಉಪಾಧ್ಯಕ್ಷೆ ನರಸಮ್ಮ, ಸದಸ್ಯರಾದ ರವಿಚಂದ್ರ, ಬಸವರಾಜ ಮಡಿವಾಳ, ಶಿವಪ್ಪ, ಬಸವ ಆಲಂ ಗೌಡ, ರಾಮಚಂದ್ರ ನಾಯಕ, ದುರ್ಯೋದನ, ನಿಂಗನಗೌಡ, ಬಸವಲಿಂಗಪ್ಪ ಸೇರಿದಂತೆ ಆಶಾ ಕಾರ್ಯಕರ್ತರಾದ ಲಕ್ಷ್ಮೀ ಮತ್ತಿತರರು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ