ಬೆಂಗಳೂರು: ವಿಶ್ವಚೇತನ ಬಳಗ ಮತ್ತು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಮೈಸೂರು ದಸರಾ ನಾಡ ಹಬ್ಬದ ಸಾಂಸ್ಕೃತಿಕ ಸಮಾರಂಭದಲ್ಲಿ ಹಿರಿಯ ಹೋರಾಟಗಾರರಾದ ಗಂಡಸಿ ಸದಾನಂದ ಸ್ವಾಮಿ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಜ್ಞಾನ ವಿಜ್ಞಾನ ಸಮಿತಿಯ ಅಧ್ಯಕ್ಷರಾದ ನಾ ಶ್ರೀಧರ್ ಮತ್ತು ಶಿವಸ್ವಾಮಿ ಅಂಬುಜ ಪ್ರಕಾಶ್ ಸೇರಿದಂತೆ ಅನೇಕ ಸಾಹಿತಿಗಳು ಚಿಂತಕರು ಕನ್ನಡಪರ ಹೋರಾಟಗಾರರು ಉಪಸ್ಥಿತರಿದ್ದರು.