LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ರಾಷ್ಟ್ರೀಯ ಪೌಷ್ಟಿಕಾಹಾರ ಸಪ್ತಾಹ

ಪೌಷ್ಟಿಕಾಹಾರ ಸೇವನೆ ಜೊತೆ ಜೊತೆಗೆ ನಮ್ಮ ಆಹಾರದ ಬಗ್ಗೆ ಗೌರವ ಹೆಚ್ಚಿಸಿಕೊಳ್ಳಬೇಕು.

ರಾಯಚೂರು : ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯೊಂದಿಗೆ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ನೆಸ್ಲೆ ಸಯೋಗದೊಂದಿಗೆ, ರಾಯಚೂರು ನಗರದ ಮುನ್ನೂರುವಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ಹಸಿರು ತರಕಾರಿಗಳು ಹಾಗೂ ಇತರೆ ಆಹಾರದಲ್ಲಿರುವಂತಹ ಪೌಷ್ಟಿಕಾಂಶದ ಕುರಿತು ತಿಳಿಸಿ ಆಹಾರ ಪದಾರ್ಥವನ್ನು ಯಾವುದೇ ಕಾರಣಕ್ಕೂ ಚೆಲ್ಲದಂತೆ ಸೇವಿಸುವ ರೂಡಿ ನಮ್ಮದಾಗಬೇಕು ಎಂದು ವಿನಂತಿಸಿದರು.



ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ತಯಾರಿಸಿಕೊಂಡು ಬಂದಿದ್ದರು. ಅದರಲ್ಲಿರುವಂತಹ ಪೌಷ್ಟಿಕಾಂಶ ಪದಾರ್ಥಗಳ ಬಗ್ಗೆ ವಿದ್ಯಾರ್ಥಿಗಳೇ ತಿಳಿಸಿದರು. ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ಬಹುಮಾನ ವಿತರಿಸಲಾಯಿತು.

 

ಕಾರ್ಯಕ್ರಮದಲ್ಲಿ ಈಶ್ವರ ಹೆಚ್‌ ದಾಸಪ್ಪನವರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ, ಸಿ.ಆರ್.ಪಿ.  ವೀರೇಶ.ಟಿ,  ಶಾಲಾ ಮುಖ್ಯ ಗುರುಗಳಾದ ಶ್ರೀನಿವಾಸ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಜಯಲಕ್ಷ್ಮಿ ಸೇರಿದಂತೆ ಸಹ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್‌ನ ಯೂತ್ ಮೆಂಟರ್‌ ಬಾಲಾಶ್ರೀ, ಅಂಕೀತಾ, ಶಿಲ್ಪಾ ಹಾಗೂ ಲೋಕೇಶ್, ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ