LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

`ಹೊಸ ಕಾರ್ಮಿಕ ಸಂಹಿತೆ-2025’ ಜಾಗೃತಿ ಕಾರ್ಯಾಗಾರ

ಬಳ್ಳಾರಿ : ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಮಿತ್ರಾ ಟೆಕ್ನಾಲಜೀಸ್ ಅವರ ಜಂಟಿ ಆಶ್ರಯದಲ್ಲಿ `ಹೊಸ ಕಾರ್ಮಿಕ ಸಂಹಿತೆ-2025’ ಜಾಗೃತಿ ಕಾರ್ಯಾಗಾರವು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಇಎಸ್ಐಸಿನ ನಿವೃತ್ತ ಅಧಿಕಾರಿ ಶೇಖ್ ಹನೀಫ್ ಅವರು, ಇಎಸ್ಐಸಿ ಮತ್ತು ಇಪಿಎಫ್ಒಗಳ ಹೊಸ ನಿಯಮಗಳು ಮತ್ತು ಉದ್ಯೋಗಿಗಳ ಸಾಮಾಜಿಕ ಭದ್ರತೆ, ಕಾನೂನುಬದ್ಧ ಸೌಲಭ್ಯಗಳು ಹಾಗೂ ವೇತನ ಪಾವತಿಯ ದಾಖಲೆಗಳ ನಿರ್ವಹಣಾ ವ್ಯವಸ್ಥೆಯ ಕುರಿತು ಸಮಗ್ರ ಮಾಹಿತಿ ನೀಡಿದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರ್ ಮಂಜುನಾಥ್ ಅವರು, ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಹೊಸ ಕಾರ್ಮಿಕ ಸಂಹಿತೆ-2025 ಕುರಿತು ಕೈಗಾರಿಕಾ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಇರುವ ಮಾನವ ಸಂಪನ್ಮೂಲ ವಿಭಾಗದ ಪ್ರತಿಯೊಬ್ಬರೂ ತಿಳಿದುಕೊಂಡು, ಅರ್ಥ ಮಾಡಿಕೊಳ್ಳಬೇಕು. ಮೂಲಕ ಕೆಲಸಗಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೇಂದ್ರ ಸರ್ಕಾರದ ಸೌಲಭ್ಯಗಳು ಸಿಗುವಂತೆ ಮುಂಜಾಗ್ರತೆಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂದರು.

ಅಷ್ಟೇ ಅಲ್ಲ, ಕೆಲಸಗಾರರ ಸಾಮಾಜಿಕ ಭದ್ರತೆ, ಕಾನೂನುಬದ್ಧ ಸೌಲಭ್ಯಗಳು ಹಾಗೂ ಉತ್ತಮವಾದ ಆಡಳಿತವನ್ನು ಪಾಲನೆ ಮಾಡಲು ಅನುಕೂಲವಾಗಲಿದೆ. ನಿಟ್ಟಿನಲ್ಲಿ ಕೇಂದ್ರ ಸರ್ಕಾರದ `ಹೊಸ ಕಾರ್ಮಿಕ ಸಂಹಿತೆ-2025’ ಅನ್ನು ಪ್ರತಿಯೊಂದು ಸಂಸ್ಥೆಯೂ ಪಾಲನೆ ಮಾಡಬೇಕು ಎಂದರು.

news_1781952427_0_606.webp

 

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು ವಂದನಾರ್ಪಣೆ ಸಲ್ಲಿಸಿದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತಾ ಗಿರಿಧರ್, ಜಂಟಿ ಕಾರ್ಯದರ್ಶಿಗಳಾದ, ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಖಜಾಂಚಿಗಳಾದ ಸಿ.ಎಸ್. ಸತ್ಯನಾರಾಯಣ, ಈವೆಂಟ್ಸ್ ಕಮಿಟಿ ಚೇರ್ಮನ್ ನೇಕಾರ್ ನಾಗರಾಜ್, ಪತ್ರಿಕಾ ಹಾಗೂ ಮಾಧ್ಯಮ ಕಮಿಟಿ ಚೇರ್ಮನ್ ಟಿ. ಶ್ರೀನಿವಾಸರಾವ್, ಮ್ಯಾಗ್ಜಿನ್ ಕಮಿಟಿ ಚೇರ್ಮನ್ ಕೌಡಕಿ ಹನುಮೇಶ್, ಬುಸ್ಮಾದ ಮರಿಸ್ವಾಮಿರೆಡ್ಡಿ, ಖಾಸಗಿ ಶಾಲೆಗಳ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರು, ವಿವಿಧ ಕೈಗಾರಿಗಳು - ಸಂಘ ; ಸಂಸ್ಥೆಗಳ ಮುಖ್ಯಸ್ಥರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ