ನಾಯಕನಹಟ್ಟಿ : ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಭ್ರಷ್ಟಚಾರ ನಡೆದಿಲ್ಲ, ಅದು ಶುದ್ಧ ಸುಳ್ಳು ಇಲ್ಲ ಸಲ್ಲದ ಆರೋಪ ಮಾಡುವುದು ಸರಿಯಲ್ಲ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾಪಮ್ಮ ಎಚ್ಚರಿಕೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಗರಣ ನಡೆದಿದ್ದರೆ ದಾಖಲೆ ತೋರಿಸಿ ಎಂದು ಕಿಡಿಕಾರಿದರು. ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಡಿಯಲ್ಲಿ ಶಾಲೆ ಮತ್ತು ಅಂಗನವಾಡಿಗಳಿಗೆ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಿದ್ದೇವೆ. ಬಡ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಎನ್.ಆರ್.ಇ.ಜಿ ಅಡಿಯಲ್ಲಿ ಕಾಂಪೌಂಡ್, ಶೌಚಾಲಯ ನಿರ್ಮಾಣ ಸೇರಿದಂತೆ ಮೂಲ ಬೂತ ಸೌಕರ್ಯಗಳನ್ನು ಒದಗಿಸಿದ್ದೇವೆ. ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವಿರುದ್ಧ ಆರೋಪ ಮಾಡುವ ಮೊದಲು ಅಧಿಕಾರಿಗಳ ಮೂಲಕ ತನಿಖೆ ನಡೆಸಲಿ, ತನಿಖೆಗೆ ನಾವು ಸಿದ್ದರಿದ್ದೇವೆ. ಮುಂದಿನ ದಿನಗಳಲ್ಲಿ ಮುಂದುವರೆದರೆ ನಿಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಮಾನ ನಷ್ಟ ಮೊಕದೊಮ್ಮೆ ಹೂಡಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಪಾಪಮ್ಮಆನಂದಪ್ಪ, ಉಪಾಧ್ಯಕ್ಷೆ ಅನಿತಾ, ಸದಸ್ಯರಾದ ಶಂಕರಸ್ವಾಮಿ, ಪಡ್ಲೂ ಬೋರಯ್ಯ, ಶಂಕರಗೌಡ, ಸಣ್ಣ ಬೋರಯ್ಯ, ಗಜೇಂದ್ರ, ಸಣ್ಣಪಾಲಯ್ಯ, ಮುಖಂಡರಾದ ಆನಂದಪ್ಪ, ರೇವಣ್ಣ, ದುರುಗೇಶ್, ಜಯಣ್ಣ ಹಾಗೂ ಇನ್ನೂ ಇತರರು ಇದ್ದರು.