LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಖಾಲಿ ಇರುವ ನಿಗಮ., ಮಂಡಳಿಗಳಿಗೆ ನಾಮ ನಿರ್ದೇಶನ ಮಾಡಿ

ಬೆಂಗಳೂರು: ಪಂಚ ಗ್ಯಾರಂಟಿಗಳ ಅನುಷ್ಠಾನದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಪಡೆದಿದೆ. ಕಳೆದ ಚುನಾವಣೆಯಲ್ಲಿ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತಿನಂತೆ ನಡೆದುಕೊಂಡಿದ್ದಾರೆ. ಕಳೆದೆರಡು ವರ್ಷಗಳಿಂದ ರಾಜ್ಯ ಸರ್ಕಾರ ಸುಸೂತ್ರವಾಗಿ ನಡೆದಿದೆ. ಆದರೆ ಇನ್ನೂ ಸರ್ಕಾರದ ವಿವಿಧ ಇಲಾಖೆಗಳು ಮತ್ತು ನಿಗಮ, ಮಂಡಳಿಗಳಲ್ಲಿ ಸ್ಥಾನಗಳು ಖಾಲಿ ಇದ್ದು, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ನೇಮಿಸಿ ಇನ್ನಷ್ಟು ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷರಾದ ಡಾ.ಸಿದ್ಧರಾಮ ವಾಘಮಾರೆ ಕೆಪಿಸಿಸಿ ನಾಯಕರು ಮತ್ತು ಆಡಳಿತ ನಡೆಸುವ ಪ್ರಭೃತಿಗಳಲ್ಲಿ ಮನವಿ ಮಾಡಿದ್ದಾರೆ. 

ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಅರಣ್ಯ, ಜೀವಿಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್, ಪೌರಾಡಳಿತ ಸಚಿವರಾದ ರಹೀಂ ಖಾನ್, ಮಾಜಿ ಸಚಿವರಾದ ರಾಜಶೇಖರ ವಿ.ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾದ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಸಚಿವರಾದ ಶಿವರಾಜ್ ತಂಗಡಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಶಾಸಕರು ಸರ್ಕಾರಕ್ಕೆ ಈ ಕುರಿತು ಶಿಫಾರಸು ಮಾಡಿದ್ದಾರೆ.

ನಮ್ಮಂತಹ ಕಾಂಗ್ರೆಸ್ ಕಾರ್ಯಕರ್ತರು ಕಳೆದ ಹಲವು ವರ್ಷಗಳಿಂದ ಪಕ್ಷಕ್ಕಾಗಿ ಅಹರ್ನಿಶಿ ದುಡಿಯುತ್ತಿದ್ದಾರೆ. ನಿಗಮ, ಮಂಡಳಿಗಳು ಮತ್ತು ಇಲಾಖೆಗಳ ಕೆಲವೊಂದು ನಾಮ ನಿರ್ದೇಶನ ಸ್ಥಾನಗಳಿಗೆ ಭರ್ತಿ ಮಾಡುವಂತೆ ಕೋರಿ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದಾರೆ. ಪಕ್ಷಕ್ಕಾಗಿ ದುಡಿದವರು ಕೆಪಿಸಿಸಿ ನಾಯಕರ ಬಳಿ ಈ ಕುರಿತು ಅಲವತ್ತುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಬಳಿಯೂ ಕೋರಿಕೊಂಡಿದ್ದಾರೆ. ಇಂದಲ್ಲ, ನಾಳೆ ತಮಗೆ ಅವಕಾಶ ಸಿಗಬಹುದು ಎಂದು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸರ್ಕಾರ ರಚನೆ ಆಗಿ ಎರಡು ವರ್ಷ ಕಳೆದರೂ ಇನ್ನೂ ಖಾಲಿ ಇರುವ ಸ್ಥಾನಗಳಿಗೆ ಭರ್ತಿ ಮಾಡಿರುವುದಿಲ್ಲ. ಈ ಕಾರಣಕ್ಕಾಗಿ ಕಾರ್ಯಕರ್ತರು ಬೇಸರಿಸಿಕೊಂಡಿದ್ದಾರೆ ಎಂದರು.



ಖಾಲಿ ಉಳಿದಿರುವ ಸ್ಥಾನಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಿದರೆ ಪಕ್ಷಕ್ಕಾಗಿ ದುಡಿಯಲು ಇನ್ನಷ್ಟು ಹುಮ್ಮಸ್ಸು ಬರುತ್ತದೆ. ಮುಂದಿನ ಚುನಾವಣೆ ವೇಳೆಗೆ ಪಕ್ಷವನ್ನು ಸಂಘಟಿಸಲು ಆನೆ ಬಲ ಬಂದಂತಾಗುತ್ತದೆ. ಪಕ್ಷದ ನಾಯಕರು ಮತ್ತು ಸರ್ಕಾರ ನಡೆಸುವ ಆಡಳಿತಗಾರರು ಕಾರ್ಯಕರ್ತರಿಗೆ ನಿರಾಶೆಗೊಳಿಸದೇ ಅವಕಾಶ ಮಾಡಿಕೊಡಬೇಕು. ಅಲೆಮಾರಿ ನಿಗಮದ ಅಧ್ಯಕ್ಷ ಸ್ಥಾನ ಮತ್ತು ಆಯೋಗದ ಸ್ಥಾನವೂ ಖಾಲಿ ಇವೆ. ಹಲವಾರು ನಿಗಮ, ಮಂಡಳಿಗಳು ಮತ್ತು ಇಲಾಖೆಗಳ ನಿರ್ದೇಶಕರ ಸ್ಥಾನಗಳು ಖಾಲಿ ಇದ್ದು ಸರ್ಕಾರದಿಂದ ನಾಮ ನಿರ್ದೇಶನ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ. 

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ