LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.24 ರಂದು ‘ಬೃಹತ್ ರಕ್ತದಾನ ಶಿಬಿರ

ಆರೋಗ್ಯವಂತರು ತಪ್ಪದೇ ರಕ್ತದಾನ ಮಾಡಿ-ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ :  ಜಿಲ್ಲಾಡಳಿತ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಹಯೋಗ ಮತ್ತು ಮಿನೇರಾ ಸ್ಟೀಲ್ ಇವರ ಸಹಕಾರದಲ್ಲಿ ಜೂ.24 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಶಿಬಿರದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬಹುದಾಗಿದೆ.



ರಕ್ತದಾನದಿಂದ ಉಪಯೋಗ:

ರಕ್ತದಾನ ಮಾಡುವುದರಿಂದ ಹಲವಾರು ರೀತಿಯ ಪ್ರಯೋಜನಗಳಿದ್ದು, ಅದರಲ್ಲಿ ಹೊಸ ರಕ್ತದ ಉತ್ಪತ್ತಿ ಆಗುವುದರ ಜೊತೆಗೆ ರಕ್ತ ಚಲನೆಯ ಕಾರ್ಯತತ್ಪರತೆ ಮತ್ತು ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ.

ಮುಖ್ಯವಾಗಿ ಇತ್ತೀಚಿನ ದಿನಗಳಲ್ಲಿ ಕೇಳಲಾಗುತ್ತಿರುವ ಹೃದಯಾಘಾತ ಪ್ರಕರಣಗಳು ಶೇ.80 ಕ್ಕಿಂತಲೂ ಕಡಿಮೆಯಾಗುತ್ತದೆ. ರಕ್ತದೊತ್ತಡ ಸೇರಿದಂತೆ ರಕ್ತದಲ್ಲಿ ಕೊಬ್ಬಿನಾಂಶ ಕಡಿಮೆ ಮಾಡಲು ರಕ್ತದಾನ ಮಾಡುವುದರಿಂದ ಸಹಾಯವಾಗಲಿದೆ.



ಏಕೆ ರಕ್ತದಾನ ಮಾಡಬೇಕು?:

ಒಬ್ಬರಿಂದ ಪಡೆದ ರಕ್ತವನ್ನು ಹೊಲ್ ಬ್ಲಡ್, ಪ್ಲೇಟ್‌ಲೆಟ್ಸ್, ಪ್ಲಾಸ್ಮಾ, ಪ್ಯಾಕಡ್ ಸೆಲ್ಸ್, ಎಂಬ ನಾಲ್ಕು ರೂಪದಲ್ಲಿ ವ್ಯಕ್ತಿಯ ಜೀವ ಉಳಿಸಲು ಬಳಸಬಹುದಾಗಿದ್ದು, ಪ್ರಸ್ತುತ ದಿನಗಳಲ್ಲಿ ರಕ್ತದ ಅವಶ್ಯಕತೆಯಿರುವುದರಿಂದ 18 ವರ್ಷ ಮೇಲ್ಪಟ್ಟ ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ರಕ್ತಹೀನತೆಯಿಂದ ಬಳಲುವ ಗರ್ಭಿಣಿ ಸ್ತಿçÃಯರಿಗೆ, ಶಸ್ತçಚಿಕಿತ್ಸಾ ಹೆರಿಗೆ ವೇಳೆ ಮತ್ತು ಅಪಘಾತಗಳು, ತುರ್ತು ಶಸ್ತçಚಿಕಿತ್ಸೆಗಳ ಸಂದರ್ಭಕ್ಕಾಗಿ ಹಾಗೂ ಕ್ಯಾನ್ಸರ್ ರೋಗಿಗಳಿಗೆ ಥ್ಯಾಲಿಸೀಮಿಯಾ, ಹಿಮೋಫಿಲಿಯಾ ಮುಂತಾದ ರೋಗಿಗಳ ಜೀವವನ್ನು ಉಳಿಸಲು ಸಹಾಯಕವಾಗಲಿದೆ. ಹಾಗಾಗಿ ಜನರ ಜೀವ ಉಳಿಸುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದ್ದಾರೆ.



ಯಾರು ರಕ್ತದಾನ ಮಾಡಬಹುದು:

45 ಕೆಜಿ ಮೇಲ್ಪಟ್ಟ ಹಾಗೂ 12.5 ಗ್ರಾಮ್‌ಗಿಂತ ಹೆಚ್ಚು ಹಿಮೋಗ್ಲೊಬಿನ್ ಇರುವ 18 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಪುರುಷರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.

ಹಾಗಾಗಿ ಜೂ.24 ರಂದು ನಡೆಯುವ ಬೃಹತ್ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST