LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಪೋಷಕರು ಮಕ್ಕಳನ್ನು ಸಂಸ್ಕೃತಿಯ ಪಥದಲ್ಲಿಕೊಂಡೊಯ್ಯಬೇಕಾಗಿದೆ

ಆಕಾಶವಾಣಿ ಸಂಗೀತ ಸಮ್ಮೇಳನದಲ್ಲಿ ಅನುಸೂಯಾ ಡಾ.ಸಿ.ಎನ್.ಮಂಜುನಾಥ್ ಕರೆ

ಬೆಂಗಳೂರು :  ಪ್ರಸ್ತುತ ಸನ್ನಿವೇಶದಲ್ಲಿ ಮಕ್ಕಳ ಮನೋವಿಕಾಸಕ್ಕೆ ಪೂರಕ ವಾತಾವರಣ ನಿರ್ಮಿಸಿಕೊಡಬೇಕಾದದ್ದು ಪೋಷಕರ ಕರ್ತವ್ಯವಾಗಿದ್ದು, ಸಂಗೀತ ಹಾಗೂ ಸಾಹಿತ್ಯದ ಕಲಿಕೆ ಹಾಗೂ ಆಸ್ವಾದನೆ ನಮ್ಮ ಬದುಕನ್ನು ಹಸನುಗೊಳಿಸುವ ಸಾಧನಗಳಾಗಿವೆ ಎಂದು ಅನುಸೂಯಾ ಡಾ.ಸಿ.ಎನ್.ಮಂಜುನಾಥ್ ಅಭಿಪ್ರಾಯಪಟ್ಟರು. ಅವರು ಬೆಂಗಳೂರು ಆಕಾಶವಾಣಿ ಕೇಂದ್ರವು ಏರ್ಪಡಿಸಿದ್ದ ಆಕಾಶವಾಣಿ ಸಂಗೀತ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿಮಾತನಾಡಿದರು. ದಾವಂತದ ಬದುಕಲ್ಲಿ ನಾವಿಂದು ಕಳೆದುಹೋಗುತ್ತಿದ್ದೇವೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಇದು ಅಪಾಯಕಾರಿ ಬೆಳವಣಿಗೆಯಾಗಿದ್ದು, ನಮ್ಮಇತಿಹಾಸ, ಪರಂಪರೆಯನ್ನು ಮರೆಯದೆ ಮೆಲುಕು ಹಾಕುವ ಕೆಲಸವಾಗಬೇಕಿದೆ. ವಚನ, ದೇವರ ನಾಮಗಳಂತಹ ಸಂಜೀವಿನಿಯ ಅಗತ್ಯ ಈಗ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎಂದು ಹೇಳಿದರು.



ಆಕಾಶವಾಣಿ ಸಂಗೀತ ಸಮ್ಮೇಳನದ 67ನೇ ಆವೃತ್ತಿಯು ಇಂದಿರಾನಗರದ ಸಂಗೀತ ಸಭಾದ ಪುರಂದರಭವನದಲ್ಲಿ ನಡೆಯಿತು. ಸಂಸ್ಕೃತಿ ಸಚಿವಾಲಯದ ಸಹಯೋಗದೊಂದಿಗೆ ಪ್ರಸಾರಭಾರತಿ ಆಯೋಜಿಸಿದ್ದ ಈ ಪ್ರತಿಷ್ಠಿತ ಉತ್ಸವವು ದೇಶಾದ್ಯಂತ 24ನಗರಗಳಲ್ಲಿನಡೆಯುತ್ತಿದೆ. ಭಾರತದ ಶ್ರೀಮಂತ ಸಂಗೀತ ಪರಂಪರೆಯನ್ನು ಉತ್ತೇಜಿಸುವ ಸಲುವಾಗಿ ಹಿಂದೂಸ್ತಾನಿ, ಕರ್ನಾಟಕ ಮತ್ತು ಲಘು/ ಜಾನಪದ ಸಂಗೀತವನ್ನು ಸಂಗೀತ ಪ್ರೇಮಿಗಳಿಗೆ ತಲುಪಿಸುವ ಮಹತ್ತರ ಗುರಿಯೊಂದಿಗೆ ಈ ಸಂಗೀತ ಕಾರ್ಯಕ್ರಮಗಳು ನಡೆಯುತ್ತವೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವು ಕರ್ನಾಟಕಶಾಸ್ತ್ರೀಯಸಂಗೀತ ಮತ್ತು ಲಘುಸಂಗೀತ ಎರಡನ್ನೂ ಒಳಗೊಂಡಿತ್ತು.



ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ದೂರದರ್ಶನ ದಕ್ಷಿಣ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕರಾದ ಭಾಗ್ಯವಾನ್ ಆಕಾಶವಾಣಿ ಹಾಗೂ ದೂರದರ್ಶನದ ಹಿರಿಯ ಅಧಿಕಾರಿಗಳಾದ ಕೆ.ಪಿ.ಸಂಜೀವ್, ಡಾ.ಎ.ಎಸ್.ಶಂಕರನಾರಾಯಣ, ಭಾಗವಹಿಸಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ