LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಯಶಸ್ವಿಯಾಗಲಿ - ಸಚಿವ ತಂಗಡಗಿ

ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್ 26 ರಿಂದ ಮೂರು ದಿನಗಳ ಕಾಲ ನಡೆಯುವ 13ನೇ ರಾಷ್ಟ್ರೀಯ ಪೆಂಕಾಕ್ ಸಿಲತ್ ಕ್ರೀಡಾಕೂಟದ ಲೋಗೊ (ಲಾಂಛನ) ಅನಾವರಣಗೊಳಿಸಿ ಸಚಿವ ಶಿವರಾಜ ತಂಗಡಗಿ ಯಶಸ್ಸಿಗೆ ಶುಭ ಹಾರೈಸಿದ್ದಾರೆ.

ಇದೇ ಮೊದಲ ಬಾರಿಗೆ ಸುಮಾರು 27 ರಾಜ್ಯಗಳ 12 ನೂರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸುತ್ತಿರುವುದು ದೊಡ್ಡ ಕಾರ್ಯಕ್ರಮವಾಗಿದೆ ಕ್ರೀಡಾಕೂಟ ಯಶಸ್ವಿಯಾಗಲಿ ಸಾಧ್ಯವಾದ ಅಗತ್ಯ ಸಹಕಾರ ನೀಡುವದಾಗಿ ಸಂಘಟಕರಿಗೆ ಭರವಸೆ ನೀಡಿದರು.

ಇದೇ ವೇಳೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಕ್ರೀಡಾಕೂಟಕ್ಕೆ ಎಲ್ಲರೂ ಕೈಜೋಡಿಸಿ ರಾಜ್ಯದಲ್ಲಿ ಮಾರ್ಷಿಯಲ್ ಆರ್ಟ್ಸ (ಸ್ವಯಂ ರಕ್ಷಣಾ ಕಲೆ) ಗೆ ಉತ್ತೇಜನ ನೀಡುವ ಜೊತೆಗೆ ಇಲ್ಲಿನ ಮಕ್ಕಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಶ್ರಮಿಸೋಣ ಎಂದರು.



ಸಂಸದ ಹಾಗೂ ರಾಜ್ಯ ಪೆಂಕಾಕ್ ಸಿಲತ್ ಕಾರ್ಯಾಧ್ಯಕ್ಷರಾದ ಕೆ. ರಾಜಶೇಖರ ಹಿಟ್ನಾಳ ಇಡೀ ಕಾರ್ಯಕ್ರಮವನ್ನು ಮುತುವರ್ಜಿವಹಿಸಿಕೊಂಡು ನಡೆಸುತ್ತಿದ್ದು, ಕೊಪ್ಪಳವನ್ನು ದೇಶದಲ್ಲಿ ಹೆಸರು ಮಾಡುವಂತಹ ಕ್ರೀಡಾಕೂಟ ನಡೆಸುತ್ತಿದ್ದು, ಪ್ರತಿಯೊಬ್ಬರೂ ಇಲ್ಲಿ ಕ್ರೀಡೆ ಬೆಳೆಸಲು ಪ್ರೋತ್ಸಾಹ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ಶ್ರೀನಿವಾಸ ಗುಪ್ತಾ, ನಗರಸಭೆ ಸದಸ್ಯ ಮುತ್ತುರಾಜ ಕುಷ್ಟಗಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ರಡ್ಡಿ ಶ್ರೀನಿವಾಸ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮತ್ತು ರಾಜ್ಯ ಸಿಲತ್ ಜಂಟಿ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ, ರಾಷ್ಟ್ರೀಯ ಪೆಂಕಾಕ್ ಸಿಲತ್ ಫೆಡರೇಷನ್ ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್ ಟೈಲರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಬದಾಮಿ ಇತರರು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ