LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಬಳ್ಳಾರಿ ಜಿಲ್ಲೆಯ ಸಮಸ್ಯೆಗಳ ಕುರಿತು ಎಫ್ಕೆಸಿಸಿಐ ಅಧ್ಯಕ್ಷರಿಗೆ ಮನವಿ ಸಲ್ಲಿಕೆ

ತುಮಕೂರು : ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಿಲ್ವರ್ ಜುಬ್ಲಿ ಸಂಭ್ರಮಾಚರಣೆ ಅಂಗವಾಗಿ ಹಾಗೂ ಎಫ್ಕೆಸಿಸಿಐ ಆಶ್ರಯದಲ್ಲಿ ಜೂನ್ 6 ಮತ್ತು 7 ರಂದು ಆಯೋಜಿಸಲಾದ ಜಿಲ್ಲಾ ಚೇಂಬರ್ಗಳ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿದರು.

ಸಮ್ಮೇಳನದ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು ಎಫ್ಕೆಸಿಸಿಐ ಅಧ್ಯಕ್ಷರಾದ ಶ್ರೀಮತಿ ಉಮಾರೆಡ್ಡಿ ಅವರಿಗೆ ಬಳ್ಳಾರಿ ಜಿಲ್ಲೆಯ ವಿವಿಧ ಸಮಸ್ಯೆಗಳು, ಕೈಗಾರಿಕಾ ಅಭಿವೃದ್ಧಿಗೆ ಅಗತ್ಯ ಕ್ರಮಗಳು ಹಾಗೂ ಮೂಲಭೂತ ಸೌಕರ್ಯಗಳ ಸುಧಾರಣೆಗೆ ಸಂಬಂಧಿಸಿದ ಮನವಿಪತ್ರವನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

news_1780765716_0_290.webp

 

ಸಮ್ಮೇಳನದಲ್ಲಿ ಹ್ಯಾಲಿಸ್ ಬ್ಲೂ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವಿಶೇಷ ಆಹ್ವಾನಿತರಾದ ಕೆ.ಎಂ. ಶಿವಮೂರ್ತಿ ಅವರಿಗೆಉತ್ತಮ ಕೈಗಾರಿಕಾ ಉದ್ಯಮಿಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕೈಗಾರಿಕಾ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಗೌರವ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಜಂಟಿ ಕಾರ್ಯದರ್ಶಿಗಳಾದ ವಿ. ರಾಮಚಂದ್ರ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಪಿ. ಗಿರೀಶ್, ಆರ್. ನಾಗರಾಜ್, ಮತ್ತು ಜಿ. ಹನುಮೇಶ್ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯದ ವಿವಿಧ ಜಿಲ್ಲೆಗಳ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದ ರಾಜ್ಯ ಮಟ್ಟದ ಸಮ್ಮೇಳನವು ಕೈಗಾರಿಕೆ, ವಾಣಿಜ್ಯ, ಹೂಡಿಕೆ, ಉದ್ಯಮಾಭಿವೃದ್ಧಿ ಹಾಗೂ ಉದ್ಯಮಿಗಳಿಗೆ ಎದುರಾಗುತ್ತಿರುವ ಸವಾಲುಗಳ ಕುರಿತು ಸಮಗ್ರ ಚರ್ಚೆಗೆ ವೇದಿಕೆಯಾಯಿತು. ವಿವಿಧ ಜಿಲ್ಲೆಗಳ ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಸಲಹೆಗಳು ಹಾಗೂ ಶಿಫಾರಸುಗಳು ಸಮ್ಮೇಳನದಲ್ಲಿ ಮಂಡಿಸಲ್ಪಟ್ಟವು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ