LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರೆಂಟಿಗೆ ಹಣ ಹೊಂದಿಸಲಾಗದೇ ಸಿಎಂರಿಂದ ಕೇಂದ್ರದ ವಿರುದ್ದ ರಾಜಕೀಯ ಆರೋಪ

14 ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15 ನೇ ಹಣಕಾಸು ಆಯೋಗದಲ್ಲಿ 1 ಲಕ್ಷ‌ ಕೋಟಿ ರೂ. ಹೆಚ್ಚಿಗೆ ಬರುತ್ತದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: 14 ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಗೂ ಹೆಚ್ಚು ಹಣ ಬರುತ್ತದೆ. ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ರಾಜಕೀಯವಾಗಿ ಮಾತನಾಡುತ್ತಾರೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.



ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು, ಹೊಸದೇನು ಹೇಳಿಲ್ಲ ಈಗಾಗಲೇ ಹಲವಾರು ಬಾರಿ ಸುಳ್ಳು ಹೇಳಿದ್ದಾರೆ. ಈಗ ಅದನ್ನೇ ಮತ್ತೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದ ಅನುದಾನ ಶೇ 32 ರಿಂದ ಶೇ 42 ಕ್ಕೆ ಏರಿಸಿದ್ದರು. ಅವರು ಶೇ 10% ಹೆಚ್ಚಳ ಮಾಡಿದ್ದಾರೆ. ಅದು ಸಿದ್ದರಾಮಯ್ಯ ಅವರಿಗೆ ಗೊತ್ತಿದ್ದು ಮರೆ ಮಾಚುತ್ತಾರೆ. ಶೇ 40% ರಿಂದ 50% ಕ್ಕೆ ಹೆಚ್ಚಳ ಮಾಡಬೇಕೆನ್ನುವುದು ನಮ್ಮೆಲ್ಲರ ಬೇಡಿಕೆಯಾಗಿದೆ. 14 ನೇ ಹಣಕಾಸು ಆಯೋಗ ಸಭೆ ನಡೆಸಿದ ಸಂದರ್ಭದಲ್ಲಿ ಐದು ಜನ ಕಾಂಗ್ರೆಸ್ ಸಚಿವರಿದ್ದರು ಆಗ ರಾಜ್ಯದ ಪರವಾಗಿ ಸರಿಯಾಗಿ ವಾದ ಮಾಡದೇ ತಮ್ಮ ತಪ್ಪು ಮುಚ್ಚಿಕೊಳ್ಳಲು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.



14 ನೇ ಹಣಕಾಸು  ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ  ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಹೆಚ್ಚಿಗೆ ಬರುತ್ತದೆ. ಈಗಾಗಲೇ 14 ನೇ ಹಣಕಾಸು ಆಯೋಗದಲ್ಲಿ ಬಂದಷ್ಟು ಹಣ ರಾಜ್ಯಕ್ಕೆ ಬಂದಿದೆ. ಇನ್ನು ಎರಡು ವರ್ಷ ಬರುತ್ತದೆ. ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ರಾಜಕೀಯವಾಗಿ ಮಾತನಾಡುತ್ತಾರೆ‌. ರಾಜ್ಯದ ರೈಲ್ವೆ ಯೋಜನೆಗೆ ಯುಪಿಎ ಅವಧಿಯಲ್ಲಿ  700 ಕೋಟಿ ರೂ. ಬಂದಿತ್ತು. ಈ ವರ್ಷ ಕೇಂದ್ರ ಸರ್ಕಾರ 7700 ಕೋಟಿ ರೂ. ಕೊಟ್ಟಿದೆ ಅದಕ್ಕೆ ಮ್ಯಾಚಿಂಗ್ ಗ್ರ್ಯಾಂಟ್ ಕೊಡಲು ರಾಜ್ಯಸರ್ಕಾರಕ್ಕೆ ಆಗುತ್ತಿಲ್ಲ. ಆರೋಗ್ಯ, ಗ್ರಾಮಿಣಾಭಿವೃದ್ದಿ, ರಸ್ತೆ ಸೇರಿದಂತೆ ಹಲವಾರು ಯೋಜನೆಗಳಿಗೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿದೆ‌. ಅದನ್ನು ರಾಜ್ಯ ಸರ್ಕಾರ ಹೇಳುವುದಿಲ್ಲ ಎಂದು ಹೇಳಿದರು.

ಜಾತಿ ಸಮೀಕ್ಷೆ ಅಧಿಕಾರವಿಲ್ಲ

ಜಾತಿ ಸಮೀಕ್ಷೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಮುಖ್ಯಮಂತ್ರಿಗಳು ಸುಮ್ಮನೆ ಹಿಂದುಳಿದ ವರ್ಗದ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಹತ್ತು ವರ್ಷದಿಂದ ಇವರೇ ಸಿಎಂ ಇದ್ದರು, ಆಗ ಯಾಕೆ ಮಾಡಲಿಲ್ಲ. ಜಾತಿ ಸಮೀಕ್ಷೆ ವಿಚಾರದಲ್ಲಿ ಸಿಎಂ ಬಹಳ ಸಂಕಷ್ಟಕ್ಕೆ ಸಿಲುಕಿದ್ದರು. ಹೈಕಮಾಂಡ್ ಅದರಿಂದ ಇವರನ್ನು ರಕ್ಷಿಸಿದೆ. ಆದರೆ, ಕೇಂದ್ರ ಸರ್ಕಾರವೇ ಮಾಡುವ ಜಾತಿ ಸಮೀಕ್ಷೆ ಅಂತಿಮ ಎಂದು ಹೇಳಿದರು.

ಯುದ್ದ ನಿಲ್ಲಿಸಲು ಶ್ರಮಿಸಬೇಕು

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿರುವುದು ಆಘಾತಕಾರಿ ವಿಚಾರ, ಈ ಬಗ್ಗೆ ಅಮೆರಿಕಾ ಕೂಡ ತುರ್ತು ಸಭೆ ನಡೆಸಿದೆ. ಒಂದೆಡೆ ರಷ್ಯಾ ಉಕ್ರೇನ್ ಯುದ್ದ, ಇದು ವಿಶ್ವದ ಮೇಲೆ ಬಹಳಷ್ಟು ಪರಿಣಾಮ ಬೀರುತ್ತದೆ. ವಿಶ್ವದ ಎಲ್ಲ ನಾಯಕರು ಯುದ್ದ ನಿಲ್ಲಿಸುವ ನಿಟ್ಟಿನಲ್ಲಿ ಪ್ರಯತ್ಮ ನಡೆಸಬೇಕು ಎಂದು ಹೇಳಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST