LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಕರ್ನಾಟಕ ನಿವಾಸಿಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಘದಿಂದ ಪ್ರತಿಭಾ ಪುರಸ್ಕಾರ

ಬೆಂಗಳೂರು :  ಕಲ್ಯಾಣ ಕರ್ನಾಟಕ ನಿವಾಸಿಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಘ ಬೆಂಗಳೂರಿನಲ್ಲಿಂದು ಹಮ್ಮಿಕೊಂಡಿದ್ದ 16ನೇ ವರ್ಷದ ಸರ್ವಸದಸ್ಯರ ಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ “ಸ್ನೇಹ ಸಮ್ಮಿಲನ” ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ದೂರದರ್ಶನದ ಉಪಮಹಾ ನಿರ್ದೇಶಕ ಎ. ಹನುಮಂತು ಸೇರಿದಂತೆ ಹಲವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಲೋಕಸೇವ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್, ಕಲ್ಯಾಣ ಕರ್ನಾಟಕ ನಿವಾಸಿಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ ಚಂದ್ರಕಾಂತ್ ಭಂಡಾರೆ, ಡಿ.ಆರ್.ಡಿ.ಒ ವಿಜ್ಞಾನಿ ಚನ್ನಬಸ್ಸಪ್ಪ ಬಳಿಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

ಬಳಿಕ ಶಿವಶಂಕರಪ್ಪ ಎಸ್. ಸಾಹುಕಾರ್ ಮಾತನಾಡಿ, ಉದ್ಯೋಗ ನೇಮಕಾತಿಯ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಭಾಗದ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕೆಲಸ ಮಾಡಲು ಆಯ್ಕೆ ಮಾಡಿಕೊಂಡರೆ ಕಲ್ಯಾಣ ಕರ್ನಾಟಕ ಭಾಗದ ಇನ್ನಷ್ಟು ಜನರಿಗೆ ಅವಕಾಶ ಸಿಗಲಿದೆ ಎಂದರು.

ದೂರದರ್ಶನದ ಉಪಮಹಾ ನಿರ್ದೇಶಕ ಎ. ಹನುಮಂತು ಮಾತನಾಡಿ, ಕಲ್ಯಾಣ ಕರ್ನಾಟಕ ನಿವಾಸಿಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಘ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಹಮ್ಮಿಕೊಂಡಿರುವುದು ಶ್ಲಾಘನೀಯ ಹಿಂದುಳಿದ ಪ್ರದೇಶ ಎನ್ನುವ ಹಣೆಪಟ್ಟಿಕಟ್ಟಿಕೊಂಡಿರುವ ಈ ಭಾಗವನ್ನು ಅದರಿಂದ ಹೊರತರುವುದು ಅವಶ್ಯ ಎಂದು ಹೇಳಿದರು.



ಚಂದ್ರಕಾಂತ್ ಭಂಡಾರೆ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಸಾಧಕರು ಪ್ರತಿಭಾನ್ವಿತರು ಬೆಂಗಳೂರಿನಲ್ಲಿದ್ದು, ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST