LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಮಂತ್ರಿ ಸ್ಥಾನ ಸಿಗುವಂತೆ ದೇವರಲ್ಲಿ ಪ್ರಾರ್ಥನೆ

ಚಿತ್ರದುರ್ಗ: ಚಿತ್ರದುರ್ಗವು ಅಭಿವೃದ್ಧಿಯ ಪಥದಲ್ಲಿ ಸಾಗಿಸುತ್ತಿರುವಂತಹ ಜನ ಮೆಚ್ಚಿದ ನಾಯಕ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರಿಗೆ ರಾಜ್ಯ ಸರ್ಕಾರದ ಸಚಿವ ಸಂಪುಟ ದರ್ಜೆಯಲ್ಲಿ ಸಚಿವ ಸ್ಥಾನ ದೊರಕಲಿ ಎಂದು ಕೆಸಿವಿ ಅಭಿಮಾನಿಗಳು ವಿಶೇಷ ಪೂಜೆಯನ್ನು ನೆರವೇರಿಸಿದ್ದಾರೆ.

 

ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಹಾಗೂ ಬಡಮಖಾನ್ ಮಸೀದಿಯಲ್ಲಿ ಸೋಮವಾರ ಕೆಸಿವಿ ಅಭಿಮಾನಿಗಳು ವತಿಯಿಂದ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸುವುದರ ಮೂಲಕ ಸಚಿವ ಸ್ಥಾನಸಿಗಲೆಂದು ದೇವರ ಮೊರೆ ಹೋಗಿದ್ದಾರೆ.

 

ಚಿತ್ರದುರ್ಗ ನಗರವನ್ನ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಶಾಸಕರು ಈಗಾಗಲೇ ಸಾಕಷ್ಟು ಸರ್ಕಾರದಿಂದ ಅನುದಾನವನ್ನು ಬಳಸುತ್ತಾ ಚಿತ್ರದುರ್ಗ ನಗರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಬಳಿ ನೇರವಾಗಿ ವಿಶೇಷ ಅನುದಾನವನ್ನು ತಂದು ಕೆಲಸ ಮಾಡುವ ಸಾಮರ್ಥ್ಯ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರಿಗೆ ಇದೆ, ಐತಿಹಾಸಿಕ ಹಿನ್ನೆಲೆ ಹೊಂದಿರುವಂತಹ ಏಳು ಸುತ್ತಿನ ಕಲ್ಲಿನ ಕೋಟೆಯ ಪ್ರಸಿದ್ಧತೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಾಕಷ್ಟು ಕನಸನ್ನ ಹೊಂದಿದ್ದಾರೆ ಹಾಗಾಗಿ ಕೆಲಸ ಮಾಡುವ ವ್ಯಕ್ತಿಗೆ ಸಚಿವ ಸ್ಥಾನ ಸಿಕ್ಕಾಗ ಮಾತ್ರ ಯಾವುದೇ ಒಂದು ಕ್ಷೇತ್ರ ಅಭಿವೃದ್ಧಿಯಾಗಲು ಸಾಧ್ಯ ಒಂದು

ನಿಟ್ಟಿನಲ್ಲಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಮುಂಚೂಣಿಯಲ್ಲಿದ್ದಾರೆ ಹಾಗಾಗಿ ಶಾಸಕರಿಗೆ ಮಂತ್ರಿ ಸ್ಥಾನ ದೊರಕಲೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ ಎಂದರು.

 

 

ಕೆಸಿವಿ ಅಭಿಮಾನಿ ಮೊಹಮ್ಮದ್ ವಾಸಿಮ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮಾತನಾಡಿ ಚಿತ್ರದುರ್ಗ ಜಿಲ್ಲೆಯ ಹಲವು ತಾಲೂಕಿನ ಹಿರಿಯ ಶಾಸಕರು ಇದ್ದಾರೆ, ಆದರೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಯುವಕರಾಗಿದ್ದು ಕ್ಷೇತ್ರದ ವಿವಿಧಡೆ ಮಿಂಚಿನAತೆ ಓಡಾಡುತ್ತಿದ್ದಾರೆ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಹಲವು ಭಾಗಗಳಲ್ಲಿ ಈಗಾಗಲೇ ಅಭಿವೃದ್ಧಿಗಳ ಭೂಮಿ ಪೂಜೆಯನ್ನು ನೆರವೇರಿಸುತ್ತಿದ್ದಾರೆ ಇವುಗಳ ಜೊತೆಗೆ ಚಿತ್ರದುರ್ಗದ ಬದಲಾವಣೆಯ ಕನಸನ್ನ ಹೊತ್ತು ಸಾಗುತ್ತಿರುವ ಶಾಸಕರು ನಮ್ಮ ಜೊತೆಗಿರುವುದು ಹೆಮ್ಮೆಯಾದ ವಿಚಾರ ಹಾಗಾಗಿ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

 

ಸಂದರ್ಭದಲ್ಲಿ ಅಕ್ಷಯ್ ಕಠಾರೆ, ಕವಾಡಿಗರಹಟ್ಟಿ ಜಗದೀಶ್, ದೇವ ರತ್ನ ಮಂಜು, ಇಮ್ತಿಯಾಜ್, ವಿಜಯ್, ಅಕ್ಷಯ್, ಮದಕರಿಪುರ ನವೀನ್, ಸಂತು ,ವಿಜಯ್, ನಂದು ರಮೇಶ್,ಗೋವಿಂದಪ್ಪ ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ