LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಸಂಯುಕ್ತ ಗಣಿ ಕಾರ್ಮಿಕ ಸಂಘದಿಂದ ಎನ್.ಎಂ.ಡಿ.ಸಿ ಆಡಳಿತ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ

ಸಂಡೂರು : ಸಂಯುಕ್ತ ಗಣಿ ಕಾರ್ಮಿಕ ಸಂಘದಿಂದ ಎನ್.ಎಂ.ಡಿ.ಸಿ ಆಡಳಿತ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಎನ್.ಎಂ.ಡಿ.ಸಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್, ಪೆಲೆಟ್ ಪ್ಲಾಂಟ್ ನ ಪ್ರಾಜೆಕ್ಟ್ ಮ್ಯಾನೇಜರ್ ಅವರುಗಳಿಗೆ  ಮನವಿ ನೀಡಲಾಯಿತು. ಈ ಸಮಸ್ಯೆ ಇತ್ಯರ್ಥ ಪಡಿಸಲು ತಹಸೀಲ್ದಾರ್ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಸಹ ಮನವಿ ಸಲ್ಲಿಸಲಾಯಿತು.

 

ಈ ಸಂದರ್ಭದಲ್ಲಿ ಮಾತನಾಡಿದ ಸಂಯುಕ್ತ ಗಣಿ ಕಾರ್ಮಿಕ ಸಂಘದ ಅಧ್ಯಕ್ಷರು, ಎಐಯುಟಿಯುಸಿ ರಾಜ್ಯ ಅಧ್ಯಕ್ಷರಾದ ಕಾ.ಕೆ ಸೊಮಶೇಖರ್ ಅವರು ಮಾತನಾಡುತ್ತಾ "ಗುತ್ತಿಗೆದಾರರ ಟೆಂಡರ್ ನವೆಂಬರ್ 18ಕ್ಕೆ ಮುಗಿದ ಹಿನ್ನಲೆಯಲ್ಲಿ, ಎನ್.ಎಂ.ಡಿ.ಸಿ ಪೆಲೆಟ್ ಪ್ಲಾಂಟ್ ಹಾಗೂ ಬೆನಿಫಿಕೇಷನ್ ಪ್ಲಾಂಟ್ ನ  ಗುತ್ತಿಗೆ ಕಾರ್ಮಿಕರ ಕೆಲಸವನ್ನು ಕೊನೆಗೊಳಿಸಲಾಗಿದೆ. ಮೂಲ ಮಾಲೀಕರಾದ ಎನ್.ಎಂ.ಡಿ.ಸಿಯು, ಕಾರ್ಮಿಕರಿಗೆ ಸೇವಾ ಭದ್ರತೆಯನ್ನು ಖಾತ್ರಿಪಡಿಸದೆ, ಮುಂದಿನ ಗುತ್ತಿಗೆದಾರರು ಬರುವವರೆಗೂ ಕಾಯಬೇಕು ಎಂದು ಹೇಳುತ್ತಿದೆ. ಕಾರ್ಮಿಕರನ್ನು ಕೆಲಸದಲ್ಲಿ ಮುಂದುವರೆಸುವ ಯಾವುದೇ ಭರವಸೆ ನೀಡುತ್ತಿಲ್ಲ. ಇದರಿಂದ ನೂರಾರು ಕಾರ್ಮಿಕರು  ಮತ್ತವರ ಕುಟುಂಬಗಳು ಬೀದಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ  ಹೊಸ ಗುತ್ತಿಗೆದಾರರು ಕೂಡಲೆ ಕಾರ್ಖಾನೆ ಆರಂಭಿಸಿ, ಕಾರ್ಮಿಕರನ್ನು   ಕೆಲಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ   ಮೂಲ ಮಾಲೀಕರಾದ ಎನ್.ಎಂ.ಡಿ.ಸಿಯು  ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೂ ಈಗ ಕೆಲಸದಲ್ಲಿರುವ ಗುತ್ತಿಗೆ ಕಾರ್ಮಿಕರಿಗೆ ಅವರಿಗೆ ನೀಡಬೇಕಾದ ಕನಿಷ್ಠ ವೇತನ , ಪಿ.ಎಫ್  ಇನ್ನಿತರ ಕಾನೂನಾತ್ಮಕ ಸೌಲಭ್ಯ ನೀಡಬೇಕು .  ಕೆಲಸಕ್ಕೆ ತೆಗೆದುಕೊಳ್ಳದೆ ಇದ್ದಲ್ಲಿ, ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಬೇಕಾಗುತ್ತದೆ"  ಎಂದು ಎಚ್ಚರಿಸಿದರು.



ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಚಂದ್ರಶೇಖರ್ ಮೇಟಿ ಮಾತನಾಡಿ "ಬೇಡಿಕೆ      ಈಡೇರುವವರೆಗೂ ಕಾರ್ಮಿಕರು ಒಗ್ಗಟ್ಟಾಗಿ ಹಂತ ಹಂತವಾಗಿ ಹೋರಾಟ ರೂಪಿಸಬೇಕು " ಎಂದು ಕರೆ ನೀಡಿದರು.

 

ಪ್ರತಿಭಟನೆಯ ಅಧ್ಯಕ್ಷತೆಯನ್ನು ಸಂಯುಕ್ತ ಗಣಿ ಕಾರ್ಮಿಕ ಸಂಘದ ಕಾರ್ಯಾಧ್ಯಕ್ಷರಾದ ಎ.ದೇವದಾಸ್ ವಹಿಸಿದ್ದರು, ಕಾರ್ಯದರ್ಶಿಗಳಾದ ಡಾ.ಪ್ರಮೋದ್ ಮಾತನಾಡಿದರು. ಮುಖಂಡರಾದ ಸುರೇಶ್, ಹುಲಿಗೇಶ್, ಮಂಜುನಾಥ್,  ಸಂತೋಷ್, ನಾಗೇಶ್, ರಾಜಪ್ಪ, ಯರ್ರಿಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

 

ಇದೇ ನವೆಂಬರ್ 28 ರಂದು ಹೊಸ  ಗುತ್ತಿಗೆದಾರರೊಂದಿಗೆ ಸಭೆ ನಡೆಸಿ, ಸಮಸ್ಯೆ ಇತ್ಯರ್ಥಪಡಿಸುವುದಾಗಿ  ಎನ್.ಎಂ.ಡಿ.ಸಿ ಅಧಿಕಾರಿಗಳು ಕೊನೆಯಲ್ಲಿ ತಿಳಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ