LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಸ್ಐ ಪತ್ನಿ ಆತ್ಮಹತ್ಯೆಗೆ ಶರಣು

 

ಬಳ್ಳಾರಿ: ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಪತ್ನಿ ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆಂದು ತಿಳಿದು ಬಂದಿದ್ದು ಸ್ವಾತಂತ್ರ್ಯ ದಿನಾಚರಣೆಯಂದೇ ಮನೆಯಲ್ಲಿ ನೇಣಿಗೆ ಶರಣಾಗಿ ಸಾವನ್ನಪ್ಪಿದ್ದಾರೆ.

 

ಮೋಕಾ ಪೊಲೀಸ್ ಠಾಣೆಯ ಕಳಿಂಗ ಅವರ ಪತ್ನಿ ಚೈತ್ರಾ(36) ಆತ್ಮಹತ್ಯೆ ಮಾಡಿಕೊಂಡಿದ್ದು ಆ.14 ರಂದು ತಮ್ಮ ತವರು ಮನೆಯಿಂದ ಗಂಡನ ಮನೆಗೆ ಆಗಮಿಸಿದ್ದರು. ಇಂದು ಗಂಡ ಮತ್ತು ಮಕ್ಕಳಿಗೆ ಸ್ವಾತಂತ್ರ್ಯೋತ್ಸವಕ್ಕಾಗಿ ಸಿದ್ಧತೆ ಮಾಡಿ ಕಳುಹಿಸಿಕೊಟ್ಟು, ಬಳಿಕ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.



ಇವರ ಸೋದರ ಮತ್ತು ಸೋದರಿಯರು ಮೃತ ಪಟ್ಟಿದ್ದರ ಹಿನ್ನೆಲೆಯಲ್ಲಿ ಚೈತ್ರಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಎರಡೂರು ವರ್ಷದಿಂದ ಮಾನಸಿಕ ಖಿನ್ನತೆಗಾಗಿ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾನಸಿಕ ಸಮಸ್ಯೆಯಿಂದ ಬಳಲಿ ದುಡಿಕಿ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪಿಎಸ್‌ಐ ಕಾಳಿಂಗ ಅವರು ಕರ್ತವ್ಯಕ್ಕೆ ಹಾಜರಾಗಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST