LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಪ್ರಾರಂಭ: ಜಿಲ್ಲಾಧಿಕಾರಿ

ಬಳ್ಳಾರಿ :                ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು  ಹೇಳಿದರು.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮಿನ ತೊಗರಿ ಉತ್ಪನ್ನ ಖರೀದಿಸುವ ಕುರಿತು ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಆದೇಶಿಸಿರುವುದರಿಂದ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ತೊಗರಿ ಖರೀದಿಸಲಾಗುವುದು ಎಂದರು.



ಪ್ರತಿ ಕ್ವಿಂಟಾಲ್ ಗೆ ರೂ.8 ಸಾವಿರದಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ ನಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ತೊಗರಿ ಬೆಳೆದ ವಿಸ್ತೀರ್ಣಕ್ಕೆ ಅನುಗುಣವಾಗಿ ತೊಗರಿ ಖರೀದಿಸಲಾಗುತ್ತದೆ. ಬೆಂಬಲ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಫ್ರೂಟ್ಸ್ ತಂತ್ರಾಂಶದ ಆಧಾರದ ಮೇಲೆ ರೈತರಿಂದ ಖರೀದಿಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನೋಂದಣಿ ಕಾರ್ಯ 80 ದಿನಗಳ ವರೆಗೆ ನಡೆಯಲಿದ್ದು, ಖರೀದಿ ಪ್ರಕ್ರಿಯೆ 90 ದಿನಗಳವರೆಗೆ ನಡೆಯಲಿದೆ. ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗೋದಾಮುಗಳನ್ನು ಶುದ್ಧವಾಗಿಟ್ಟುಕೊಳ್ಳಬೇಕು. ಮೂಲಭೂತ ಸೌಕರ್ಯವುಳ್ಳ ಖರೀದಿ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು ತೂಕ ಪ್ರಮಾಣೀಕತೆ ಸೇರಿದಂತೆ ಬೇಕಾದ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ರೈತರು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸುವಾಗ ಆಧಾರ್ ಕಾರ್ಡ್, ಪಹಣಿ ಪತ್ರಿಕೆ, ಆಧಾರ್ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸ್‌ಬುಕ್ ಜೆರಾಕ್ಸ್ ಪ್ರತಿ ಸಲ್ಲಿಸಬೇಕು. ಖರೀದಿ ಕೇಂದ್ರಗಳಲ್ಲಿ ಪಿ.ಓ.ಎಸ್. ಯಂತ್ರದ ಮೂಲಕ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಆಧಾರ್ ಬಯೋ ಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿದ್ದು, ರೈತರು ಇದಕ್ಕೆ ಸಹಕರಿಸಬೇಕು ಎಂದರು.



ಅದೇರೀತಿಯಾಗಿ ರೈತರು ಫ್ರೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳುವ ಕುರಿತು ಸಹ ಅಗತ್ಯ ಮಾಹಿತಿ ರೈತರಿಗೆ ಒದಗಿಸುವಂತೆಯೂ ಸೂಚಿಸಿದರು.

ರೈತರ ಹೆಸರಿನ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಜಮೆ ಆಗಲಿದ್ದು, ರೈತರು ಕಡ್ಡಾಯವಾಗಿ ಎಫ್‌ಐಡಿ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಕೊಳ್ಳುವಂತೆ ತಿಳಿಸಬೇಕು ಎಂದರು.

ಸಭೆsೆಯಲ್ಲಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಓಂಕಾರಯ್ಯ, ಕೃಷಿ ಜಂಟಿ ನಿರ್ದೇಶಕ ಸೋಮಸುಂದರ್, ಸಹಕಾರ ಇಲಾಖೆಯ ಉಪನಿಬಂಧಕ ವೀರಭದ್ರಯ್ಯ, ಕಾನೂನು ಮಾಪನ ಶಾಸ್ತç ಇಲಾಖೆಯ ನಿರೀಕ್ಷಕ ಮನೋಜ್ ಕುಮಾರ್ ಸೇರಿದಂತೆ ಖರೀದಿ ಎಜೆನ್ಸಿಗಳ ಅಧಿಕಾರಿಗಳು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ