ತಮ್ಮ ಏಕೈಕ ಪುತ್ರ ಕಿರೀಟಿ ಅಭಿನಯಿಸಿದ ಜೂನಿಯರ್ ಚಿತ್ರ ವೀಕ್ಷಣೆ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತ, ನನ್ನ ಮತ್ತು ರಾಮುಲು ನಡುವಿನ ಸ್ನೇಹ ಹದಿನೈದನೇ ವಯಸ್ಸಿನಿಂದ ಇರುವಂಥದ್ದು. ನಲವತ್ತು ವರ್ಷಗಳಿಂದ ಜೊತೆಗಿದ್ದೇವೆ. ಶೀಘ್ರದಲ್ಲಿ ಇಬ್ಬರೂ ಜೂನಿಯರ್ ಸಿನಿಮಾ ನೋಡುತ್ತೇವೆ. ನಾಲ್ಕು ದಶಕಗಳಷ್ಟು ಹಳೆಯ ಸ್ನೇಹ ಯಾವುದೋ ಒಂದು ಘಟನೆಯಿಂದ ಬದಲಾವಣೆ ಆಗಲ್ಲ ಎಂದು ಹೇಳಿದರು.

ತಮ್ಮ ಮತ್ತೊಬ್ಬ ಅಣ್ಣ ಜಿ.ಸೋಮಶೇಖರ್ ರೆಡ್ಡಿ, ಪತ್ನಿ ಲಕ್ಷಿö್ಮÃ ಅರಣಾ, ಪುತ್ರಿ ಬ್ರಹ್ಮಿಣಿ, ಪುತ್ರ ಕಿರೀಟಿ ಸೇರಿದಂತೆ ಕುಟುಂಬ ಸಮೇತರಾಗಿ ಜೂನಿಯರ್ ಸಿನಿಮಾವನ್ನು ವೀಕ್ಷಿಸಿದ ಅವರು, ಸಿನೇಮಾ ಸಖತ್ ಆಗಿದೆ, ಚಿತ್ರದಲ್ಲಿ ಎಲ್ಲವೂ ಅದ್ಭುತವಾಗಿ ಮೂಡಿಬಂದಿವೆ. ಚಿತ್ರ ಯಶಸ್ಸು ಗಳಿಸುತ್ತದೆ. ಚಿಕ್ಕಂದಿನಿAದ ಪುನೀತ್ ರಾಜಕುಮಾರ್, ಎನ್‌ಟಿಆರ್ ಅವರನ್ನು ನೋಡುತ್ತಾ ಬೆಳೆದಿರುವ ಕಿರೀಟಿ, ಅವರಿಂದ ಪ್ರೇರಣೆಯಾಗಿ ಇಂದು ಈ ಮಟ್ಟಕ್ಕೆ ಬೆಳೆದಿದ್ದಾನೆ. ಮನೆಯಲ್ಲಿ ರಾಜಕೀಯ ಇದ್ದರೂ ಕೂಡ ಅವನಿಗೆ ರಾಜಕೀಯ ಬಗ್ಗೆ ಆಸಕ್ತಿಯೇ ಇರಲ್ಲಿಲ್ಲ, ಸಿನಿಮಾ ಕಡೆಗೆ ಅವನ ಒಲವು ಹೆಚ್ಚಾಗಿತ್ತು. ಆ ಸಿನಿಮಾ ಹುಚ್ಚು ಅವನನ್ನು ಇಲ್ಲಿಯವರೆಗೆ ತಂದಿದೆ ಎಂದರು.