LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾ ಗೆ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ಪ್ರದಾನ

ಹುಣಸಗಿ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೈಚಬಾಳ ಗ್ರಾಮದ ಯುವತಿ ಕು: ರೇಣುಕಾ ತಂ/ಮಹಾರಾಯ ಗೆ 2026 ನೇ ಸಾಲಿನ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇವರ ವತಿಯಿಂದ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇವರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ಕೊಡಮಾಡುವ 2026 ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.



ಕುಮಾರಿ ರೇಣುಕಾ ಅವರು ಸಮಾಜದ ಬಗ್ಗೆ ಹೊಂದಿರುವ ಕಾಳಜಿ ಮತ್ತು ಕ್ರೀಡೆಯಲ್ಲಿ ಅವರು ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ 2025-26ನೇ ಸಾಲಿನ ಪ್ರತಿಷ್ಠಿತ  ರಾಜ್ಯ ಯುವ ಪ್ರಶಸ್ತಿಯನ್ನು ನೀಡಲಾಗಿದೆ.

 

ಗ್ರಾಮದ ಯುವತಿಯ  ಸಾಧನೆಗೆ ಬೈಚಬಾಳ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಶೈಲ್, ತಿಪ್ಪಯ್ಯಸ್ವಾಮಿ,ಶಿಕ್ಷಕಿ ರೇಣುಕಾ ಬಿಳೇವಾಯಿ, ಎಸ್. ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣ ಪಾಟೀಲ್,ಗೌಡಪ್ಪ ಪೂಜಾರಿ,ಭೀಮನಗೌಡ ಪಾಟೀಲ್,  ಶರಣಗೌಡ ಪೊಲೀಸ್ ಪಾಟೀಲ್ ಸೇರಿದಂತೆ ಬೈಚಬಾಳ ಗ್ರಾಮಸ್ಥರು  ಸತ್ಕರಿಸಿ ಗೌರವಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST